ದೇಶ

ರಾಹುಲ್ ಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ದೊರೆಯಲಿಲ್ಲ: ದಿಗ್ವಿಜಯ್

ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿಗೆ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಯಾವುದೇ ಅವಕಾಶ ದೊರೆಯಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ...

ರಾಹುಲ್ ಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ದೊರೆಯಲಿಲ್ಲ: ದಿಗ್ವಿಜಯ್
ರಾಹುಲ್ ಗಾಂಧಿ
Published On :

ನವದೆಹಲಿ: ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿಗೆ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಯಾವುದೇ ಅವಕಾಶ ದೊರೆಯಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ರಾಹುಲ್ ಗಾಂಧಿ ಎಲ್ಲಿಯೂ ಓಡಿ ಹೋಗಿಲ್ಲ. ಅವರು ರಜೆ ಮೇಲೆ ತೆರಳುವ ಮೊದಲೇ, ಕಾಂಗ್ರೆಸ್ ನ ಮುಂದಿನ ಹೆಜ್ಜೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಪತ್ರಕರ್ತರಿಂದ ತಮ್ಮ ಬಗ್ಗೆ ಈ ರೀತಿ ಹೇಳಿಕೆಗಳು ಬಂದಿರುವುದನ್ನು ಕೇಳಿ ಆಶ್ಚರ್ಯ ಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಹುಲ್ ಗಾಂಧಿ ತಮಗೆ  ಪಕ್ಷದಲ್ಲಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಬಿಡುವುದಿಲ್ಲ ಎಂಬ ದೃಢ ನಿರ್ಧಾರದಲ್ಲಿದ್ದಾರೆ ಎಂದ ದಿಗ್ವಿಜಯ್ ಸಿಂಗ್, ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅವರನ್ನು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಬಿಡುತ್ತಿಲ್ಲ ಎಂದು ಹೇಳಿದ್ದಾರೆ.

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನಡುವೆ ಯಾವುದೇ ಮನಸ್ತಾಪಗಳಿಲ್ಲ. ವಯಸ್ಸಿಗೆ ತಕ್ಕಂತೆ ಯೋಚನಾ ಶಕ್ತಿ ವಿಭಿನ್ನವಾಗಿದ್ದು, ಅದನ್ನು ಹೊರತು ಪಡಿಸಿದರೇ ಇನ್ನಾವುದೇ ಭಿನ್ನಭಿಪ್ರಾಯಗಳಿಲ್ಲ ಎಂದು ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.