ದೇಶ

ಕಾಶ್ಮೀರಕ್ಕೆ 25 ಸಚಿವರ ಸಂಪುಟ

ಜಮ್ಮು ಮತ್ತು ಕಾಶ್ಮೀರದಲ್ಲಿ ನಿರೀಕ್ಷೆಯಂತೆ ಮಾ.1ರಂದು ಪಿಡಿಪಿ ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಅಂದು ಪಿಡಿಪಿ ನಾಯಕ ಮುಫ್ತಿ...

ಕಾಶ್ಮೀರಕ್ಕೆ 25 ಸಚಿವರ ಸಂಪುಟ
ಮೋದಿ-ಮುಫ್ತಿ ಮೊಹಮ್ಮದ್ ಸಯೀದ್
Published On :

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಿರೀಕ್ಷೆಯಂತೆ ಮಾ.1ರಂದು ಪಿಡಿಪಿ ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಅಂದು ಪಿಡಿಪಿ ನಾಯಕ ಮುಫ್ತಿ ಮೊಹಮ್ಮದ್ ಸಯೀದ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಫ್ತಿ  ಅವರು ಒಟ್ಟು 24 ಮಂದಿ ಸಚಿವ ಸಂಪುಟದ ನೇತೃತ್ವವಹಿಸಲಿದ್ದು, ಇದರಲ್ಲಿ ಬಿಜೆಪಿ ಹಾಗೂ ಪಿಡಿಪಿ ತಲಾ 12 ಸ್ಥಾನಗಳನ್ನು ಹಂಚಿಕೊಳ್ಳಲಿವೆ. ಈ ಸಂಬಂಧ ಮುಫ್ತಿ  ಮೊಹಮ್ಮದ್ ಸಯೀದ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಯಾಗಿ ಕೆಲಕಾಲ ಮಾತುಕತೆ ನಡೆಸಿ ದರು. ಸುಮಾರು ಒಂದು ಗಂಟೆ ಕಾಲ ನಡೆದ ಚರ್ಚೆಯಲ್ಲಿ ಅವರು ಸರ್ಕಾರ ರಚನೆಗೆ ಸಂಬಂಧಿಸಿದ ಅಂತಿಮ ಮಾತುಕತೆ ನಡೆಸಿದರು. ಈ ವೇಳೆ ಪ್ರಧಾನಿ ಮೋದಿ ಅವರಿಗೂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ
ಮುಫ್ತಿ  ಆಹ್ವಾನ ನೀಡಿದರು. ಬಿಜೆಪಿ ಪಾಲಿಗೆ ಐತಿಹಾಸಿಕವಾಗಿರುವ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮೈತ್ರಿ ಕುದುರಿಸುವಲ್ಲಿ ಮಹತ್ವ ದ ಪಾತ್ರವಹಿಸಿದ್ದ ಪಿಡಿಪಿ ಮುಖಂಡ ಹಸೀಬ್ ದ್ರಾಬು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.