ದೇಶ

ಸರ್ಕಾರ ರಚನೆ ಪ್ರಸ್ತಾಪ: ಸಮಯ ಕೇಳಿದ ಬಿಜೆಪಿ

ಅಂತಿಮ ನಿರ್ಧಾರವೊಂದಕ್ಕೆ ಬರಲು ಬಿಜೆಪಿ ಇನ್ನಷ್ಟು ದಿನಗಳ ಕಾಲಾವಕಾಶ ಕೋರಿದೆ...

ಸರ್ಕಾರ ರಚನೆ ಪ್ರಸ್ತಾಪ: ಸಮಯ ಕೇಳಿದ ಬಿಜೆಪಿ
ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಜುಗಲ್ ಕಿಶೋರ್ ಶರ್ಮಾ
Published On :

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿ ಅಂತಿಮ ನಿರ್ಧಾರವೊಂದಕ್ಕೆ ಬರಲು ಬಿಜೆಪಿ ಇನ್ನಷ್ಟು ದಿನಗಳ ಕಾಲಾವಕಾಶ ಕೋರಿದೆ. ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿದೆ.

ಇತ್ತೀಚಿನ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿಯು ಮುಖ್ಯಮಂತ್ರಿ ಹುದ್ದೆಯ ವಿಚಾರದಲ್ಲಿ ಬಿಜೆಪಿಯ ಕೆಲ ಷರತ್ತುಗಳಿಗೆ ಒಪ್ಪಿಗೆ ನೀಡುವ  ಸೂಚನೆ ನೀಡುತ್ತಿರುವ ಹಿನ್ನೆಲೆಯಲ್ಲಿ ಪಕ್ಷ ಈ ನಿರ್ಧಾರ ತೆಗೆದುಕೊಂಡಿದೆ.

ಸರ್ಕಾರ ರಚನೆಗೆ ರಾಜ್ಯಪಾಲರು ಜ.19ರ ಗಡುವು ನೀಡಿದ್ದಾರೆ. ಬಿಜೆಪಿಯು ಪಿಡಿಪಿ ಮಾತ್ರವಲ್ಲದೆ ಇತರೆ ಪಕ್ಷಗಳ ಜತೆಗೂ ಮಾತುಕತೆ ನಡೆಸುತ್ತಿದೆ. ರಾಜ್ಯದ ಜನರಿಗೆ ಸದ್ಯದಲ್ಲೇ ಉತ್ತಮ ಸುದ್ದಿ ಸಿಗಲಿದೆ ಎಂದು ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಜುಗಲ್ ಕಿಶೋರ್ ಶರ್ಮಾ ಹೇಳಿದ್ದಾರೆ.

ರಾಜ್ಯಪಾಲ ಎನ್.ಎನ್.ವೋಹ್ರಾ ಅವರ ಜತೆಗಿನ ಮಾತುಕತೆ ಬಳಿಕ ಅವರು ಈ ವಿಚಾರ ತಿಳಿಸಿದ್ದಾರೆ. ಬುಧವಾರವಷ್ಟೇ ರಾಜ್ಯಪಾಲರನ್ನು ಭೇಟಿಯಾಗಿದ್ದ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅವರು ಬಿಜೆಪಿ ಜತೆಗಿನ ಮೈತ್ರಿ ಸಾಧ್ಯತೆ ಕುರಿತು ಸೂಚನೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.