ದೇಶ

ಮರ್ಯಾದಾ 'ಮಾನಹರಣ': ಪ್ರೇಮಿಗಳ ವಿವಸ್ತ್ರಗೊಳಿಸಿ ಅಪಮಾನ

ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದಾರೆ ಎಂದು ಪ್ರೇಮಿಗಳನ್ನು ವಿವಸ್ತ್ರಗೊಳಿಸಿ, ತಲೆಬೋಳಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮರ್ಯಾದಾ 'ಮಾನಹರಣ': ಪ್ರೇಮಿಗಳ ವಿವಸ್ತ್ರಗೊಳಿಸಿ ಅಪಮಾನ
ಗ್ರಾಮಸ್ಥರಿಂದ ಥಳಿತಕ್ಕೊಳಗಾದ ಮಹಿಳೆ (ಸಂಗ್ರಹ ಚಿತ್ರ)
Published On :

ಭೋಪಾಲ್: ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದಾರೆ ಎಂದು ಪ್ರೇಮಿಗಳನ್ನು ವಿವಸ್ತ್ರಗೊಳಿಸಿ, ತಲೆಬೋಳಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಪೋಷಕರಿಗೆ ತಿಳಿಸದೇ ಓಡಿಹೋಗಿ ಅಂತರ್ಜಾತಿ ವಿವಾಹ ಮಾಡಿಕೊಂಡ ಹಿನ್ನಲೆಯಲ್ಲಿ ಪ್ರೇಮಿಗಳನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಥಳಿಸಿದ್ದಾರೆ. ಅಲ್ಲದೆ ಯುವಕನ ತಲೆ ಬೋಳಿಸಿ ಇಡೀ ಊರಿನಲ್ಲಿ ಮೆರವಣಿಗೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗ್ರಾಮದ ಹಿರಿಯರನ್ನೆಲಾದವರೇ ಈ ಘಟನೆಯಲ್ಲಿ ಪಾಲ್ಗೊಂಡಿದ್ದು, ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ.

ಪರಸ್ಪರ ಪ್ರೀತಿಸಿದ್ದ ಈ ಯುವ ಜೋಡಿ, ಕಳೆದ ಡಿಸೆಂಬರ್ 21ರಂದು ಮನೆಯವರನ್ನು ತೊರೆದು ಮಧ್ಯಪ್ರದೇಶದ ಅಲಿರಾಜ್‌ಪುರ್ ಜಿಲ್ಲೆಯ ಗ್ರಾಮವೊಂದರಲ್ಲಿ ಬಂದು ನೆಲೆಸಿದ್ದರು. ಈ ವಿಚಾರವನ್ನು ತಿಳಿದ ಸಂಬಂಧಿಕರು ಸ್ಥಳೀಯ ಬುಡಕಟ್ಟು ಪಂಚಾಯತ್ ನಲ್ಲಿ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪಂಚಾಯತ್ ಪ್ರೇಮಿಗಳ ತಲೆ ಬೋಳಿಸುವಂತೆ ಆದೇಶ ನೀಡಿದೆ. ಇನ್ನು ಈ ವೇಳೆ ಪ್ರಿಯಕರ ಮತ್ತು ಮಹಿಳೆಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಥಳಿಸಲಾಗಿದೆ ಎಂದು ತಿಳಿದುಬಂದಿದೆ.

ಗಂಡನನ್ನು ತ್ಯಜಿಸಿ ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಮಹಿಳೆ
ಇದೇ ಸಂದರ್ಭದಲ್ಲಿ ಓಡಿ ಬಂದಿರುವ ಮಹಿಳೆ ತನ್ನ ಗಂಡ ಮತ್ತು ಮಕ್ಕಳನ್ನು ತ್ಯಜಿಸಿ ಪ್ರಿಯಕರನೊಂದಿಗೆ ಓಡಿಬಂದಿದ್ದಾಳೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಮಹಿಳೆಗೆ ಈಗಾಗಲೇ ವಿವಾಹವಾಗಿದ್ದು, ಮೂವರು ಮಕ್ಕಳು ಕೂಡ ಇದ್ದಾರೆ. ಆದರೂ ಆಕೆ ಪ್ರಿಯಕರನೊಂದಿಗೆ ಪರಾರಿಯಾಗಿದ್ದಳು ಎಂದು ಆರೋಪಿಸಲಾಗಿದೆ. ಇನ್ನು ಈ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಹಿಳೆಯ ತನ್ನ ಗಂಡ ಮತ್ತು ಆತನ ಸಹೋದರರು ನಿತ್ಯ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಇದನ್ನು ತಡೆಯಲಾಗದೇ ನಾನು ಕಳೆದ 10 ದಿನಗಳ ಹಿಂದೆ ಓಡಿ ಬಂದಿದ್ದೆ. ಇದೀಗ ನಮ್ಮನ್ನು ಗ್ರಾಮಸ್ಥರು ನಮ್ಮ ತಲೆ ಬೋಳಿಸಿ ಥಳಿಸಿದ್ದಾರೆ ಎಂದು ಮಹಿಳೆ ಹೇಳಿದ್ದಾಳೆ.

ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸದಂತೆ ಉಭಯ ಪರಿವಾರದವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಥಳಿಸಿದ ಆರೋಪದ ಮೇಲೆ ಗ್ರಾಮದ 10 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್ಲದೆ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಅವರ ಊರಿಗೆ ವಾಪಸ್ ಕಳುಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.