ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯನಿಗೆ ಕಪಾಳಮೋಕ್ಷ

ಚಂಡಿಪುರ್: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿಗೆ ಅಪರಿಚಿತ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ್ದಾನೆ.
ತೃಣಮೂಲ ಕಾಂಗ್ರೆಸ್‌ನ ಸದಸ್ಯನಾಗಿರುವ ಅಭಿಷೇಕ್ ಬ್ಯಾನರ್ಜಿ ಇಂದು ಮಧ್ಯಾಹ್ನ ಚಂಡಿಪುರ್‌ನ ಪಶ್ಚಿಮ ಮಿಡ್ನಾಪುರ್ ಜಿಲ್ಲೆಯಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಅಭಿಷೇಕ್‌ರೊಂದಿಗೆ ಪೋಟೋ ತೆಗೆದುಕೊಳ್ಳುವ ನೆಪ ಹೇಳಿ ಅಪರಿಚಿತ ವ್ಯಕ್ತಿ ವೇದಿಕೆಗೆ ಬಂದಿದ್ದಾನೆ.
ವೇದಿಕೆ ಮೇಲೆ ಮಾತನಾಡುತ್ತಿದ್ದ ಸಂದರ್ಭದಲ್ಲೇ ಬಲವಾಗಿ ಅಭಿಷೇಕ್ ಮುಖಕ್ಕೆ ಗುದ್ದಿದ್ದಾರೆ. ಕೂಡಲೇ ವೇದಿಕೆ ಮೇಲಿದ್ದ ಟಿಎಂಸಿ ಸದಸ್ಯರು ವ್ಯಕ್ತಿಗೆ ಇಗ್ಗಾಮುಗ್ಗ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಾವ ಕಾರಣಕ್ಕಾಗಿ ಅಭಿಷೇಕ್ ಬ್ಯಾನರ್ಜಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂಬುದು ತಿಳಿದುಬಂದಿಲ್ಲ. ಅಪರಿಚಿತ ವ್ಯಕ್ತಿ ಪಕ್ಷದ ಕಾರ್ಯಕರ್ತನಲ್ಲ. ಹೊರಗಿನವನಾಗಿದ್ದು, ಶೀಘ್ರವಾಗಿ ಕಾರಣ ತಿಳಿಯಲಾಗುವುದು ಎಂದು ಪಕ್ಷದ ಮುಖಂಡ ಸುವೇನ್ದು ಅಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


