ಶಾರದಾ ಚಿಟ್‌ಫಂಡ್: ಸುಪ್ರೀಂಗೆ ಅರ್ಜಿ ಸಲ್ಲಿಸಲು ದೀದಿ ನಿರ್ಧಾರ
ಬಹುಕೋಟಿ ಶಾರದಾ ಚಿಟ್‌ಫಂಡ್ ಹಗರಣ ವಿಚಾರಣೆಯನ್ನು ಸುಪ್ರೀಂಕೋರ್ಟ್‌ಗೆ ತೆಗೆದುಕೊಂಡು...

ಕೋಲ್ಕತ್ತಾ: ಬಹುಕೋಟಿ ಶಾರದಾ ಚಿಟ್‌ಫಂಡ್ ಹಗರಣ ವಿಚಾರಣೆಯನ್ನು ಸುಪ್ರೀಂಕೋರ್ಟ್‌ಗೆ ತೆಗೆದುಕೊಂಡು ಹೋಗಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ.
ಹಗರಣದಲ್ಲಿ ಮಮತಾ ಬ್ಯಾನರ್ಜಿ ಅವರೂ ಪ್ರಮುಖ ಫಲಾನುಭವಿಯಾಗಿದ್ದು, ಹಗರಣದ ತನಿಖೆ ಮೇಲೆ ತಮ್ಮ ಅಧಿಕಾರ ಪ್ರಭಾವ ಬೀರಲು ಯತ್ನಿಸುತ್ತಿದ್ದಾರೆ ಎಂಬ ವಿರೋಧ ಪಕ್ಷದ ಆರೋಪವನ್ನು ತಳ್ಳಿಹಾಕುವ ಸಲುವಾಗಿ ದೀದಿ ಈ ರೀತಿಯ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಾರದಾ ಗ್ರೂಪ್ ನಡೆಸುತ್ತಿರುವ ಚಿಟ್‌ಫಂಡ್ ಸಮೂಹ ಸಂಸ್ಥೆಯಾಗಿರುವ ಶಾರದಾ ಗ್ರೂಪ್ ಮೀಡಿಯಾ ನಡೆಸುತ್ತಿದ್ದ ಪತ್ರಿಕೆ ಮತ್ತಿತರ ವಿಭಾಗಗಳ ಕೆಲಸಗಾರರಿಗೆ ವೇತನ ನೀಡಲಾಗಲಿಲ್ಲ.ಅಕ್ರಮ ವ್ಯವಹಾರಗಳ ಮೂಲಕ ಉದ್ಯೋಗಿಗಳನ್ನು ವಂಚಿಸಲಾಗುತ್ತಿದೆ ಎಂಬ ಮಾಹಿತಿ 2013ರಲ್ಲಿ ಬೆಳಕಿಗೆ ಬಂತು. ಅದೇ ವೇಳೆಗೆ ಬಂಗಾಳ, ಒಡಿಶಾ, ತ್ರಿಪುರಾ, ಜಾರ್ಖಂಡ್ ಮತ್ತು ಅಸ್ಸಾಂನ ಸಾವಿರಾರು ಜನರು ತಾವೂ ಹೂಡಿದ್ದ ಹಣ ವಾಪಸ್ ನೀಡುವಂತೆ ಆಗ್ರಹಿಸಿ ಶಾರದಾ ಚಿಟ್‌ಫಂಡ್ ವಿರುದ್ಧ ಪ್ರತಿಭಟನೆಗಿಳಿದರು. ಈ ಆರೋಪಗಳ ಸಂಬಂಧ ಪಶ್ಚಿಮ ಬಂಗಾಳ ಸರಕಾರ ತನಿಖೆಗೆ ಆಯೋಗವನ್ನೂ ರಚಿಸಿತ್ತು. 2013ರ ಏಪ್ರಿಲ್ 23 ರಂದು ಶಾರದಾ ಗ್ರೂಪ್ ಅಧ್ಯಕ್ಷ ಸುದಿಪ್ತ ಸೇನ್ ಹಾಗೂ ಅವರ ಇಬ್ಬರು ನಿಕಟ ವರ್ತಿಗಳ ಸಹಿತ ಕಾಶ್ಮೀರದ ಸೊನ್ಮಾರ್ಗ್‌ನಲ್ಲಿ ಬಂಧಿಸಲಾಗಿತ್ತು.
ಪಶ್ಚಿಮ ಬಂಗಾಳ, ಒಡಿಸ್ಸಾ, ಅಸ್ಸಾಂ ಮತ್ತು ತ್ರಿಪುರಾದಲ್ಲಿ ನಡೆದ ಶಾರದಾ ಚಿಟ್ ಫಂಡ್ ಹಗರಣವನ್ನು ಸಿಬಿಐ ತನಿಖೆಗೆ ಒಳಪಡಿಸಲು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ನಂತರ ರಾಜ್ಯ ಕೊಂಡಿಗಳನ್ನು ಹೊಂದಿರುವ ಈ ಅವ್ಯವಹಾರಗಳಲ್ಲಿ ರಾಜಕಾರಣಿಗಳೂ ಸೇರಿದಂತೆ ಪ್ರಭಾವಿ ವ್ಯಕ್ತಿಗಳು ಒಳಗೊಂಡಿರುವ ಸಾಧ್ಯತೆ ಇದೆ. ಅಕ್ರಮಗಳ ಒಳಸಂಚು, ಅದರ ಆಯಾಮ, ಹಣದ ವಹಿವಾಟುಗಳ ಬಗ್ಗೆ ತನಿಖೆ ನಡೆಸುವಲ್ಲಿ ಅಥವಾ ಆಸ್ತಿಪಾಸ್ತಿ ವಶಪಡಿಸಿಕೊಳ್ಳುವಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಇದುವೆರೆಗೂ ಯಾವುದೇ ಪ್ರಗತಿ ಸಾಧಿಸಿಲ್ಲ ಹಾಗಾಗಿ ಈ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


