ಸುನಂದಾ ಪುಷ್ಕರ್ ಸಾವು ಸಹಜ ಸಾವಲ್ಲ, ಕೊಲೆ

ನವದೆಹಲಿ: ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರ ಸಾವು ಅಸಹಜ ಎಂದಿರುವ ದೆಹಲಿ ಪೊಲೀಸರು, ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಏಮ್ಸ್ ಆಸ್ಪತ್ರೆಯ ವೈದ್ಯಕೀಯ ವರದಿಯನ್ನಾಧರಿಸಿ ದೆಹಲಿ ಪೊಲೀಸರು ದೂರು ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಕಳೆದ ಡಿಸೆಂಬರ್ 29ರಂದು ಏಮ್ಸ್ ಆಸ್ಪತ್ರೆಯ ವೈದ್ಯರು ನೀಡಿರುವ ಮರಣೋತ್ತರ ವೈದ್ಯಕೀಯ ಪರೀಕ್ಷಾ ವರದಿಯನ್ನಾಧರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿಎಸ್ ಬಸ್ಸಿ ಅವರು ಹೇಳಿದ್ದಾರೆ.
ವೈದ್ಯಕೀಯ ಪರೀಕ್ಷಾ ವರಿಗಳನ್ವಯ ಸುನಂದಾ ಪುಷ್ಕರ್ ಅವರ ಸಾವು ಅಸಹಜ ಸಾವಿಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಸುನಂದಾ ಅವರ ದೇಹದಲ್ಲಿ ವಿಷಕಾರಿ ಅಂಶಗಳ ಪತ್ತೆಯಾಗಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಆದರೆ ಎಂತಹ ಮತ್ತು ಯಾವ ರೀತಿ ವಿಷದ ವಸ್ತು ಇತ್ತು ಎನ್ನುವುದರ ಕುರಿತಾದ ವರದಿ ಇನ್ನಷ್ಟೇ ಬರಬೇಕಿದೆ ಎಂದು ಬಸ್ಸಿ ಸ್ಪಷ್ಟಪಡಿಸಿದ್ದಾರೆ.
2014 ಜನವರಿ 17ರಂದು ದೆಹಲಿಯ ಖಾಸಗಿ ಹೊಟೆಲ್‌ನಲ್ಲಿ ಸುನಂದಾ ಪುಷ್ಕರ್ ಅವರು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು. ಲೋಕಸಭೆ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕಲಾಪದಲ್ಲಿ ಪಾಲ್ಗೊಂಡಿದ್ದ ಪತಿ ಶಶಿತರೂರ್ ಅವರೊಂದಿಗೆ ಸುನಂದ ಪುಷ್ಕರ್ ಅವರು ಖಾಸಗಿ ಹೊಟೆಲ್‌ನಲ್ಲಿ ತಂಗಿದ್ದರು. ಆದರೆ ಜನವರಿ 17ರ ರಾತ್ರಿ ವೇಳೆಗೆ ಸುನಂದಾ ಪುಷ್ಕರ್ ಅವರು ತಮ್ಮ ಕೊಠಡಿಯಲ್ಲಿಯೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


