'ಜ.10ಕ್ಕೆ ಇಸಿಸ್ ದಾಳಿ': ಮುಂಬೈ ವಿಮಾನ ನಿಲ್ದಾಣದಲ್ಲಿ ನೋಟ್ ಪತ್ತೆ
ಜನವರಿ 10ರಂದು ದಾಳಿ ಮಾಡುವುದಾಗಿ ಬೆದರಿಕೆ ಹಾಕಿದೆ ಕೈ ಬರಹದ...

ಮುಂಬೈ: ಜನವರಿ 10ರಂದು ದಾಳಿ ಮಾಡುವುದಾಗಿ ಬೆದರಿಕೆ ಹಾಕಿದೆ ಕೈ ಬರಹದ ನೋಟ್ವೊಂದು ಬುಧವಾರ ಮುಂಬೈನ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ತೀವ್ರ ಕಟ್ಟೆಚ್ಚರ ವಿಧಿಸಲಾಗಿದೆ.
ಮುಂಬೈನ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ ಇರುವ ಶೌಚಾಲಯದಲ್ಲಿ ಈ ನೋಟ್ ಪತ್ತೆಯಾಗಿದ್ದು, ಅದರಲ್ಲಿ “ATTECK BY ISIS DATE 10/01/15 (sic)”. ಎಂದು ಕೈಯಿಂದ ಗೋಡೆಯ ಮೇಲೆ ಗೀಚಲಾಗಿದೆ.
ವಿಮಾನ ನಿಲ್ದಾಣದ ಭದ್ರತಾ ಉಸ್ತುವಾರಿ ಹೊತ್ತಿರುವ ಸಿಐಎಸ್ಎಫ್, ನಿಲ್ದಾಣದಲ್ಲಿರುವ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದೆ. ಅಲ್ಲದೆ ಈ ಸಂಬಂಧ ವಿಮಾನ ನಿಲ್ದಾಣದ ಸ್ವಚ್ಛತಾ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಟರ್ಮಿನಲ್ ಎರಡರಲ್ಲಿರುವ ಶೌಚಾಲಯವನ್ನು ಸಾಮಾನ್ಯವಾಗಿ ವಿಮಾನದಲ್ಲಿ ಆಗಮಿಸುವ ಪ್ರಯಾಣಿಕರು ಬಳಸುತ್ತಾರೆ. ಹೀಗಾಗಿ ವಿಮಾನದಲ್ಲಿ ಬಂದಿಳಿದ ವ್ಯಕ್ತಿಗಳೇ ಈ ದುಷ್ಕೃತ್ಯವನ್ನು ಎಸಗಿರಬಹುದು ಎಂದು ಶಂಕಿಸಲಾಗಿದೆ.
ಈ ಬೆದರಿಕೆ ನೋಟ್ನ ಮಾಹಿತಿಯನ್ನು ಸಿಐಎಸ್ಎಫ್ ಮುಂಬೈ ಪೊಲೀಸರಿಗೆ ನೀಡಿದ್ದು, ಪೊಲೀಸರಿ ಮುಂಬೈಯಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


