ಸಂಧಾನ ಯಶಸ್ವಿ ಕಲ್ಲಿದ್ದಲು ಮುಷ್ಕರ ಹಿಂದಕ್ಕೆ
ಕೋಲ್ ಇಂಡಿಯಾವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವುದಿಲ್ಲ...

ನವದೆಹಲಿ: ಎರಡು ದಿನಗಳ ಕಾಲ ದೇಶಾದ್ಯಂತ ನಡೆದ ಕೋಲ್ ಇಂಡಿಯಾ ಲಿಮಿಟೆಡ್ ನೌಕರರ ಮುಷ್ಕರ ಹಿಂಪಡೆಯಲಾಗಿದೆ.
ಬುಧವಾರ ತಡರಾತ್ರಿ ದೆಹಲಿಯಲ್ಲಿ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜತೆ ನಡೆದ ಮಾತುಕತೆ ಯಶಸ್ವಿಯಾಗಿದೆ. ಈ ಸಂದರ್ಭದಲ್ಲಿ ಕೋಲ್ ಇಂಡಿಯಾವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವುದಿಲ್ಲ, ಅದರಿಂದ ಬಂಡವಾಳ ಹಿಂಪಡೆಯುವುದಿಲ್ಲ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ.
1977ರ ಬಳಿಕ ಅತಿದೊಡ್ಡ ಮುಷ್ಕರ ಎಂದು ಬಣ್ಣಿಸಲಾಗಿದ್ದ ನೌಕರರ ಪ್ರತಿಭಟನೆ ಎರಡು ದಿನಗಳ ಹಿಂದೆ ಆರಂಭವಾಗಿತ್ತು. ಒಟ್ಟಾರೆ ಮುಷ್ಕರದಿಂದ ದೇಶದ ಹೆಚ್ಚಿನ ಕಲ್ಲಿದ್ದಲು ಬ್ಲಾಕ್‌ಗಳಲ್ಲಿ ಕೆಲಸ ಸ್ಥಗಿತಗೊಂಡಿತ್ತು. ಮಾತ್ರವಲ್ಲದೆ ರೂ.300 ಕೋಟಿ ನಷ್ಟವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


