ದೇಶ

ಸುನಂದಾ ಕೊಲೆ: ಶಶಿ ತರೂರ್‌ಗೆ ನೋಟೀಸ್ ನೀಡಿಲ್ಲ ಎಂದ ಪೊಲೀಸರು

ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್...

ಸುನಂದಾ ಕೊಲೆ: ಶಶಿ ತರೂರ್‌ಗೆ ನೋಟೀಸ್ ನೀಡಿಲ್ಲ ಎಂದ ಪೊಲೀಸರು
Published On :

ನವದೆಹಲಿ: ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ನೋಟೀಸ್ ನೀಡಿಲ್ಲ ಎಂದು ದೆಹಲಿ ಪೊಲೀಸರು ಗುರುವಾರ ಸ್ಪಷ್ಟ ಪಡಿಸಿದ್ದಾರೆ.

ದೆಹಲಿ ಪೊಲೀಸ್ ಆಯುಕ್ತ ಬಿಎಸ್ ಬಸ್ಸಿ ಅವರು ಮಾತನಾಡಿ, ತರೂರ್‌ಗೆ ಯಾವುದೇ ರೀತೀಯ ನೋಟೀಸ್ ಜಾರಿ ಮಾಡಿಲ್ಲ. ವಿಶೇಷ ತನಿಖಾ ತಂಡ ಈ ಸಂಬಂಧ ತನಿಖೆ ನಡೆಸಲಿದ್ದು, ಪ್ರಮುಖ ಸಾಕ್ಷಿಗಳ ಪಟ್ಟಿ ಸಿದ್ಧಗೊಳಿಸಲಾಗುತ್ತಿದೆ. ಆದರೆ, ಪ್ರಕರಣ ಸಂಬಂಧ ತರೂರ್‌ಗೆ ಯಾವುದೇ ನೋಟೀಸ್ ನೀಡಿಲ್ಲ ಎಂದು ಹೇಳಿದ್ದಾರೆ.

ಸುನಂದಾ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ವಿಚಾರಣೆಗೆ ಸಹಕರಿಸುವಂತೆ ಶಶಿ ತರೂರ್‌ಗೆ ದೆಹಲಿ ಪೊಲೀಸರು ನೋಟೀಸ್ ನೀಡಿದ್ದಾರೆ ಎನ್ನಲಾಗಿತ್ತು. ಆದರೆ, ದೆಹಲಿ ಪೊಲೀಸರು ಈ ವರದಿಯನ್ನು ತಳ್ಳಿ ಹಾಕಿದ್ದಾರೆ.

ಪ್ರಸ್ತುತ ಶಶಿ ತರೂರ್ ಕೇರಳದಲ್ಲಿದ್ದು, ಮಾಧ್ಯಮಗಳಿಂದ ದೂರ ಉಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ದೆಹಲಿ ಸರೋಜಿನಿ ನಗರ ಪೊಲೀಸರು ಸುನಂದಾ ಪುಷ್ಕರ್ ಅಸಹಜ ಸಾವು ಎಂದು ಹೇಳಿದ್ದು, ಪ್ರಕರಣವನ್ನು ಐಪಿಸಿ 302 ಅಡಿ ಕೊಲೆ ಎಂದು ದಾಖಲಿಸಿಕೊಂಡಿದ್ದರು. ಎಫ್‌ಐಆರ್‌ನಲ್ಲಿ ಯಾರ ಹೆಸರನ್ನು ಪ್ರಸ್ತಾಪಿಸದೇ, ಅಪರಿಚಿತ ವ್ಯಕ್ತಿಗಳಿಂದ ಕೊಲೆ ನಡೆದಿದೆ ಎಂದು ನಮೂದಿಸಿಕೊಂಡಿದ್ದರು.

ದೆಹಲಿ ಉಪ ಪೊಲೀಸ್ ಆಯುಕ್ತ ಪ್ರೇಮನಾಥ್ ಉಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ)ವನ್ನು ರಚಿಸಲಾಗಿದೆ.

ಕಳೆದ ಜನವರಿ 17ರಂದು ದೆಹಲಿಯ ಪಂಚತಾರಾ ಹೋಟೆಲೊಂದರಲ್ಲಿ 52 ವರ್ಷದ ಸುನಂದಾ ಶಂಕಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಡಿ.29ರಂದು ನೀಡಿರುವ ಅಂತಿಮ ವೈದ್ಯಕೀಯ ವರದಿ 'ಸುನಂದಾ ವಿಷ ಪ್ರಾಶನದಿಂದ ಸಾವನ್ನಪ್ಪಿದ್ದು ಅಸಹಜ ಸಾವು' ಎಂದು ಹೇಳಿತ್ತು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.