ಗಾಂಧಿಗೆ 'ಸಾಲ್ಟ್ ಮೌಂಟೇನ್' ಸ್ಮಾರಕ ಅರ್ಪಿಸಿದ ಮೋದಿ
'ಸಾಲ್ಟ್ ಮೌಂಟೇನ್' ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬೆಳಿಗ್ಗೆ...

ಗಾಂಧಿನಗರ: 'ಸಾಲ್ಟ್ ಮೌಂಟೇನ್' ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬೆಳಿಗ್ಗೆ ಉದ್ಘಾಟಿಸಿದ್ದಾರೆ.
ಮಹಾತ್ಮಾ ಗಾಂಧಿ ಕಾಂಪ್ಲೆಕ್ಸ್ ಬಳಿ ನೂತನವಾಗಿ ನಿರ್ಮಿಸಲಾದ ಸಾಲ್ಟ್ ಮೌಂಟೇನ್ ಸ್ಮಾರಕವನ್ನು ಮೋದಿ ಉದ್ಘಾಟಿಸಿದ್ದು, ಇದನ್ನು ಮಹಾತ್ಮಾ ಗಾಂಧಿಗೆ ಅರ್ಪಿಸಿದ್ದಾರೆ.
ಮಹಾತ್ಮಾ ಗಾಂಧಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಮರಳಿದ ದಿನದ ನೆನಪಿಗಾಗಿ ಜನವರಿ 7-9ರವರೆಗೆ ಮಹಾತ್ಮಾ ಗಾಂಧಿ ಕಾಂಪ್ಲೆಕ್ಸ್‌ನಲ್ಲಿ ಮೂರು ದಿನಗಳ ಪ್ರವಾಸಿ ಭಾರತೀಯ ಕಾರ್ಯಕ್ರಮ ನಡೆಯುತ್ತಿದೆ. ನಿನ್ನೆ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
13ನೇ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮ ಇದಾಗಿದ್ದು, ಗಾಂಧಿ ಜೀವನ ಚರಿತ್ರೆ ಚಿತ್ರಗಳು, ಗಾಂಧಿ ಕುಟೀರ ಸೇರಿದಂತೆ ಇತರೆ ಪ್ರದರ್ಶನಗಳನ್ನು ಮೋದಿ ವೀಕ್ಷಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪರಸ್ಪರ ಸಂಪರ್ಕ ಬೆಳೆಸುವ ಹಾಗೂ ವಾಣಿಜ್ಯ ಸಂಬಂಧವನ್ನು ದೃಢಗೊಳಿಸುವ ನಿಟ್ಟಿನಲ್ಲಿ ಭಾರತೀಯ ಮೂಲದ ವ್ಯಕ್ತಿಗಳನ್ನು ಜತೆಗೂಡಿಸುವ ವಾರ್ಷಿಕ ಕಾರ್ಯಕ್ರಮವಾದ 13ನೇ ಪ್ರವಾಸಿ ಭಾರತೀಯ ದಿವಸ್‌ನಲ್ಲಿ 4,000ಕ್ಕಿಂತಲೂ ಹೆಚ್ಚು ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


