ದೇಶಪಾಂಡೆ ನಿಯೋಗ ಅಹಮದಾಬಾದ್‌ಗೆ
'ಕರ್ನಾಟಕದ ವಾಣಿಜ್ಯೋದ್ಯಮದಲ್ಲಿ ಬಂಡವಾಳ ಹೂಡಿಕೆ ಅವಕಾಶ' ಕುರಿತ ವಿಚಾರ ಸಂಕಿರಣ...

ಬೆಂಗಳೂರು: ಪ್ರವಾಸಿ ಭಾರತೀಯ ದಿನದ ಶತಮಾನೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಅವರ ನೇತೃತ್ವದ ನಿಯೋಗ ಗುಜರಾತ್‌ನ ಅಹಮದಾಬಾದ್‌ಗೆ ತೆರಳಿದೆ.
ನಾನಾ ಇಲಾಖೆ ಅಧಿಕಾರಿಗಳು, ಉದ್ಯಮಿಗಳು, ಅನಿವಾಸಿ ಭಾರತೀಯರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳ ನಿಯೋಗವು 3 ದಿನಗಳ ಉತ್ಸವದಲ್ಲಿ ಪಾಲ್ಗೊಳ್ಳಲಿದೆ.
ಕರ್ನಾಟಕದಲ್ಲಿನ ಪ್ರವಾಸೋದ್ಯಮ ಅವಕಾಶಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಸಚಿವ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ 'ಕರ್ನಾಟಕದ ವಾಣಿಜ್ಯೋದ್ಯಮದಲ್ಲಿ ಬಂಡವಾಳ ಹೂಡಿಕೆ ಅವಕಾಶ' ಕುರಿತ ವಿಚಾರ ಸಂಕಿರಣ ನಡೆಯಲಿದೆ.
ಅನಿವಾಸಿ ಭಾರತೀಯ ವೇದಿಕೆ ಉಪಾಧ್ಯಕ್ಷ ವಿ.ಸಿ.ಪ್ರಕಾಶ್, ಮಣಿಪಾಲ್ ಗ್ಲೋಬಲ್ ಶೈಕ್ಷಣಿಕ ಸಂಸ್ಥೆ ಅಧ್ಯಕ್ಷ ಮೋಹನದಾಸ್ ಪೈ, ಟೊಯೋಟೊ ಕಿರ್ಲೋಸ್ಕರ್ ಉಪಾಧ್ಯಕ್ಷ ಶೇಖರ್ ವಿಶ್ವನಾಥನ್, ಎಕ್ಸ್ ಸಂಸ್ಥೆಯ ಅಧ್ಯಕ್ಷ ಅರವಿಂದ್ ಮೆಳ್ಳಿಗೇರಿ, ಡಾ.ದೇವಿಶೆಟ್ಟಿ ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


