ಸ್ಪೆಕ್ಟ್ರಂ: ಮಿತ್ತಲ್, ರವಿ ರೂಯಿಯಾ ನಿರಾಳ
ಹೆಚ್ಚುವರಿ ಸ್ಪೆಕ್ಟ್ರಂ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಈ ಇಬ್ಬರೂ ಉದ್ಯಮಿಗಳ ವಿರುದ್ಧ ಸಮನ್ಸ್...

ನವದೆಹಲಿ: ಹೆಚ್ಚುವರಿ ಸ್ಪೆಕ್ಟ್ರಂ ಹಗರಣದಲ್ಲಿ ಆರೋಪಿಗಳಾಗಿರುವ ಭಾರತಿ ಸೆಲ್ಯುಲರ್ ಲಿ.ನ ಸಿಎಂಡಿ ಸುನಿಲ್ ಭಾರ್ತಿ ಮಿತ್ತಲ್ ಮತ್ತು ಎಸ್ಸಾರ್ ಗ್ರೂಪ್‌ನ ಪ್ರವರ್ತಕ ರವಿ ರೂಯಿಯ ಅವರು ಸದ್ಯಕ್ಕೆ ನಿರಾಳರಾಗಿದ್ದಾರೆ.
2002ರ ಎನ್‌ಡಿಎ ಅವಧಿಯ ಹೆಚ್ಚುವರಿ ಸ್ಪೆಕ್ಟ್ರಂ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಈ ಇಬ್ಬರೂ ಉದ್ಯಮಿಗಳ ವಿರುದ್ಧ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು.
ಆದರೆ, ಈ ಕುರಿತು ಉದ್ಯಮಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ವಿಶೇಷ ನ್ಯಾಯಾಲಯದ ಈ ಆದೇಶವನ್ನು ರದ್ದು ಮಾಡಿದೆ.
ಆರೋಪಿಗಳ ವಿರುದ್ಧ ಪುರಾವೆ ಸಿಕ್ಕರೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಿಗೆ ಸಮನ್ಸ್ ಜಾರಿಗೊಳಿಸಲು ಎಲ್ಲ ರೀತಿ ಅಧಿಕಾರ ಇದೆ ಎಂದು ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರನ್ನೊಳಗೊಂಡ ಪೀಠ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


