ಚುನಾವಣೆ ಗೆಲುವು: ಗಾಳಿಯಲ್ಲಿ ಹಣ ತೂರಿದ ಆಪ್ ಕಾರ್ಯಕರ್ತರು
ದೆಹಲಿಯ ಸ್ಥಳೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಹಣ..

ನವದೆಹಲಿ: ದೆಹಲಿಯ ಸ್ಥಳೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಹಣದ ನೋಟುಗಳನ್ನು ಗಾಳಿಯಲ್ಲಿ ತೂರಿದ ಘಟನೆ ವರದಿಯಾಗಿದೆ.
ದೆಹಲಿಯ ಕಂಟೋನ್ಮೆಂಟ್ ಬೋರ್ಡ್‌ಗೆ ನಡೆದ ಚುನಾವಣೆಯಲ್ಲಿ ಆಪ್ ಅಭ್ಯರ್ಥಿ ನಂದಕಿಶೋರ್ ಬೇನಿವಾಲ್ ಅವರು ಗೆಲುವು ಸಾಧಿಸಿದ್ದರು. ಗೆಲುವಿನ ಬಳಿಕ ಕಚೇರಿ ಬಳಿ ನಡೆದ ಸಂಭ್ರಮಾಚರಣೆ ವೇಳೆ ಇಬ್ಬರು ಕಾರ್ಯಕರ್ತರು ಹಣದ ಕಂತೆಯನ್ನು ತೆಗೆದು ನೋಟುಗಳನ್ನು ಗಾಳಿಯಲ್ಲಿ ತೂರಿದ್ದಾರೆ. ಇದನ್ನು ಕೆಲ ಮಾಧ್ಯಮಗಳು ಚಿತ್ರೀಕರಿಸಿಕೊಂಡಿದ್ದು, 'ಆಪ್' ಕಾರ್ಯಕರ್ತರ ಈ ನಡವಳಿಕೆಗೆ ದೇಶಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.
ಇನ್ನು ಘಟನೆ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಆಪ್ ಅಭ್ಯರ್ಥಿ ನಂದಕಿಶೋರ್ ಬೇನಿವಾಲ್ ಅವರು, ಹಣವನ್ನು ಗಾಳಿಯಲ್ಲಿ ತೂರಿದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಜನರು ತಮ್ಮ ಸಂಭ್ರಮವನ್ನು ವಿವಿಧ ರೀತಿಯಲ್ಲಿ ವ್ಯಕ್ತಪಡಿಸುತ್ತಾರೆ ಎಂದು ಹೇಳಿದರು.
ಕಾರ್ಯಕರ್ತರನ್ನು ಉಚ್ಛಾಟಿಸಿದ 'ಆಪ್'
ಇನ್ನು ಹಣವನ್ನು ಗಾಳಿಯಲ್ಲಿ ತೂರುವ ಮೂಲಕ ವ್ಯಾಪಕ ಟೀಕೆಗೆ ಗುರಿಯಾಗಿರುವ ಇಬ್ಬರು ಕಾರ್ಯಕರ್ತರನ್ನು ಆಮ್ ಆದ್ಮಿ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿದುಬಂದಿದೆ. ಪಕ್ಷದ ನೀತಿ ವಿರುದ್ಧ ನಡೆದುಕೊಂಡ ಹಿನ್ನಲೆಯಲ್ಲಿ ಈ ಇಬ್ಬರು ಕಾರ್ಯಕರ್ತರನ್ನು ಉಚ್ಛಾಟಿಸಲಾಗಿದೆ ಎಂದು ದೆಹಲಿ 'ಆಪ್' ಘಟಕ ಸ್ಪಷ್ಟನೆ ನೀಡಿದೆ.
ದೆಹಲಿ ವಿಧಾನಸಭಾ ಚುನಾವಣೆ ಈಗಷ್ಟೇ ಘೋಷಣೆಯಾಗಿದ್ದು, ಚುನಾವಣೆಗೆ ಸಿದ್ಧವಾಗುತ್ತಿರುವ ಆಮ್ ಆದ್ಮಿ ಪಕ್ಷಕ್ಕೆ ಈ ಘಟನೆ ತೀವ್ರ ಮುಜುಗರವನ್ನುಂಟು ಮಾಡಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


