ದೇಶ

ಗ್ರೀನ್‌ಪೀಸ್ ಸದಸ್ಯರಿಗಿಲ್ಲ ವಿದೇಶಯಾನ ಅವಕಾಶ!

ಗ್ರೀನ್‌ಪೀಸ್ ಸದಸ್ಯರಿಗಿಲ್ಲ ವಿದೇಶಯಾನ ಅವಕಾಶ!
ಪ್ರಿಯಾ ಪಿಲ್ಲೈ
Published On :

ನವದೆಹಲಿ: ದೇಶ ವಿರೋಧಿ ಕೆಲಸ ಮಾಡುತ್ತಿರುವ ಆರೋಪ ಎದುರಿಸುತ್ತಿರುವ ಗ್ರೀನ್‌ಪೀಸ್ ಇಂಡಿಯಾ ಎನ್‌ಜಿಒದ ಸದಸ್ಯೆಗೆ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳು ವಿದೇಶಕ್ಕೆ ತೆರಳದಂತೆ ಅಡ್ಡಿ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಈ ರೀತಿ ಮಾಡುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಗ್ರೀನ್‌ಪೀಸ್‌ನ ಹಿರಿಯ ಪ್ರಚಾರಕಿ ಪ್ರಿಯಾ ಪಿಲ್ಲೈ ಲಂಡನ್‌ಗೆ ತೆರಳಲು ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿದ್ದರು.

ಆದರೆ, ಅವರ ವೀಸಾ ತಪಾಸಣೆ ನಡೆಸಿದ ಅಧಿಕಾರಿಗಳು ಪ್ರಯಾಣಕ್ಕೆ ಅವಕಾಶ ನೀಡಲಿಲ್ಲ. ಇದರಿಂದ ಕುಪಿತಗೊಂಡ ಪ್ರಿಯಾ, ವೀಸಾ ಅವಧಿ ಇದ್ದರೂ ಹೀಗೆ ಏಕೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಆಗ ಗ್ರೀನ್‌ಪೀಸ್ ಇಂಡಿಯಾದ ಯಾವೊಬ್ಬರೂ ಭಾರತ ಬಿಟ್ಟು ತೆರಳಲು ಅವಕಾಶ ನೀಡಬಾರದು ಎಂದು ಕೇಂದ್ರ ಆದೇಶ ಹೊರಡಿಸಿದೆ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.