ಸರ್ಕಾರಿ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಕೌನ್ಸಿಲರ್

ನವದೆಹಲಿ: ಅಕ್ರಮ ಕಟ್ಟಡ ಕಾಮಗಾರಿಯನ್ನು ನಿಲ್ಲಿಸಲು ಮುಂದಾದ ಅಧಿಕಾರಿಗೆ ಬಿಜೆಪಿ ಕೌನ್ಸಿಲರ್ ಕಪಾಳಮೋಕ್ಷ ಮಾಡಿದ್ದಾರೆ.
ದಕ್ಷಿಣ ದೆಹಲಿಯಲ್ಲಿ ಅಕ್ರಮವಾಗಿ ಕಟ್ಟದ ನಿರ್ಮಾಣ ಮಾಡಲಾಗುತ್ತಿದ್ದು, ಇದನ್ನು ನಿಲ್ಲಿಸಲು ಮುಂದಾದ ದೆಹಲಿಯ ಪೌರ ಕಿರಿಯ ಇಂಜಿನಿಯರ್‌ಗೆ ಕೌನ್ಸಿಲರ್ ನೀರಜ್ ಗುಪ್ತ ಕಪಾಳಕ್ಕೆ ಹೊಡೆದಿರುವ ದೃಶ್ಯಗಳು ಕ್ಯಾಮರಗಳಲ್ಲಿ ಸೆರೆಯಾಗಿದೆ.
ದೆಹಲಿಯ ಸಂಗಮ್ ವಿಹಾರ್‌ನ ಕೌನ್ಸಿಲರ್ ನೀರಜ್ ಗುಪ್ತ ಇಂಜಿನಿಯರ್ ಮೇಲೆ ಮತ್ತೊಮ್ಮೆ ಕೈ ಮಾಡಲು ಮುಂದಾದಾಗ ಸ್ಥಳೀಯರೆ ಅವರನ್ನು ತಡೆದಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ. ಸಾರ್ವಜನಿಕ ಪ್ರತಿನಿಧಿಯಾಗಿ ಈ ರೀತಿ ಮಾಡಬಾರದಾಗಿತ್ತು ಎಂದು ಬಿಜೆಪಿ ವಕ್ತಾರ ನಳಿನ್ ಕೊಹ್ಲಿ ಹೇಳಿದ್ದಾರೆ.
ಫೆಬ್ರವರಿ 7 ರಂದು ದೆಹಲಿ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಈ ಪ್ರಕರಣವನ್ನು ತಮ್ಮ ದಾಳವನ್ನಾಗಿ ಬಳಸಿಕೊಳ್ಳಲು ರಾಜಕೀಯ ಪಕ್ಷಗಳು ಮುಂದಾಗಿವೆ.
ಈ ಘಟನೆಯನ್ನು ಖಂಡಿಸಿರುವ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್, ಬಿಜೆಪಿಗೆ ಏನು ಬೇಕು? ಬಿಜೆಪಿ ಹಿಂಸೆಯ ಮೂಲಕ ಚುನಾವಣೆಯನ್ನು ಗೆಲ್ಲಬಹುದು ಎಂದು ಭಾವಿಸಿದರೆ ಅದು ಅವರ ಮೂರ್ಖತನ ಎಂದು ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


