ಗಂಗಾನದಿಯಲ್ಲಿ ನೂರಾರು ಶವ ಪತ್ತೆ: ತನಿಖೆಗೆ ಆದೇಶ
ಭಾರತದ ಪ್ರವಿತ್ರ ಗಂಗಾನದಿ ಶುದ್ಧಿಕರಣ...

ಲಖನೌ: ಭಾರತದ ಪ್ರವಿತ್ರ ಗಂಗಾನದಿ ಶುದ್ಧಿಕರಣಕ್ಕಾಗಿ ಕೇಂದ್ರ ಸರ್ಕಾರ ಮುಂದಾಗಿದ್ದರೆ, ಅತ್ತ ಗಂಗಾನದಿಯಲ್ಲಿ ನೂರಾರು ಶವಗಳು ತೇಲುತ್ತಿದ್ದು ತೀವ್ರ ಆಂತಕ ಸೃಷ್ಠಿಸಿದೆ.
ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯ ಪೆರಿಯಾರ್ ಘಾಟ್ ಬಳಿಯ ಕೆನಾಲ್‌ನಲ್ಲಿ 100ಕ್ಕೂ ಹೆಚ್ಚು ಅನಾಥ ಶವಗಳು ತೇಲುತ್ತಿದ್ದು ತೀವ್ರ ಆಂತಕ ಸೃಷ್ಠಿಸಿದೆ. ಪ್ರಕರಣವನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸರ್ಕಾರ ತನಿಖೆಗೆ ಆದೇಶಿಸಿದೆ.
ಸರಿಯಾಗಿ ಅಂತ್ಯಕ್ರಿಯೆ ನಡೆಸದೇ ಗಂಗಾನದಿಯಲ್ಲಿ ಶವಗಳನ್ನು ತೇಲಿಬಿಟ್ಟಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗಂಗಾನದಿಯ ನೀರಿನ ಮಟ್ಟ ಕಡಿಮೆಯಾಗುತ್ತಿದ್ದಂತೆ ಈ ಶವಗಳು ಹೊರ ಬಂದಿರುವ ಶಂಕೆ ವ್ಯಕ್ತವಾಗಿದೆ. ಮತ್ತೊಂದೆಡೆ ಕೊಲೆ ಮಾಡಿ ಈ ಶವಗಳನ್ನು ಗಂಗಾನದಿಯಲ್ಲಿ ಎಸೆದಿರುವ ಬಗ್ಗೆಯೂ ಗುಮಾನಿ ಇದ್ದು, ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ, ಉತ್ತರಪ್ರದೇಶ ಸರ್ಕಾರದಿಂದ ಮಾಹಿತಿ ಕೇಳಿದ್ದು, ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


