ಎಲ್‌ಇಟಿ ಉಗ್ರ ಸಂಘಟನೆಯ ಉಗ್ರ ಅಬು ಹುಜೈಫ ಎನ್‌ಕೌಂಟರ್

ಸೊಪೋರ್: ಕಾಶ್ಮೀರದ ಸೊಪೋರ್‌ನ ಚಾಂಕೇನ್‌ನಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ.
ಆರು ಗಂಟೆಗಳ ನಿರಂತರ ಕಾರ್ಯಾಚರಣೆಯಲ್ಲಿ ಕಟ್ಟಡವೊಂದರಲ್ಲಿ ಅಡಗಿ ಕುಳಿತಿದ್ದ ಲಷ್ಕರ್-ಎ-ತೊಯ್ಬಾ ಸಂಘಟನೆಯ ಪ್ರಮುಖ ಉಗ್ರನನ್ನು ಭದ್ರತಾ ಪಡೆ ಎನ್‌ಕೌಂಟರ್ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಚಾಂಕೇನ ಪ್ರದೇಶದ ಕಟ್ಟಡವೊಂದರಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಮನೆಯೊಂದನ್ನು ಸುತ್ತುವರಿದಿದ್ದ ಭದ್ರತಾ ಪಡೆ ಉಗ್ರರ ವಿರುದ್ಧ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಈ ಎನ್‌ಕೌಂಟರ್‌ನಲ್ಲಿ ಲಷ್ಕರ್ ಎ ತೊಯ್ಬಾ ಸಂಘಟನೆಯ ಪ್ರಮುಖ ಉಗ್ರ ಅಬು ಹುಜೈಫ ಎಂದು ಗುರುತಿಸಲಾಗಿದೆ. ಮೃತದೇಹವನ್ನು ವಶಪಡಿಸಿಕೊಂಡಿರುವ ಭದ್ರತಾ ಪಡೆಗಳು ಘಟನಾ ಸ್ಥಳದಲ್ಲಿ ಹಲವು ಶಸ್ತ್ರಾಸ್ರಗಳನ್ನು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


