ಸುನಂದಾ ಕೊಲೆ ಪ್ರಕರಣ: ಪೊಲೀಸರಿಗೆ ಒತ್ತಡ ಹೇರಿಲ್ಲ-ರಾಜನಾಥ್
ಕೇಂದ್ರ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಹತ್ಯೆ ಪ್ರಕರಣ ಸಂಬಂಧ...

ನವದೆಹಲಿ: ಕೇಂದ್ರ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರ ಮೇಲೆ ಯಾವುದೇ ಒತ್ತಡ ಹೇರಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸ್ಪಷ್ಟ ಪಡಿಸಿದ್ದಾರೆ.
ಸುನಾಂದಾ ಕೊಲೆ ಪ್ರಕರಣದಲ್ಲಿ ಯಾವುದೇ ರಾಜಕೀಯ ಒತ್ತಡ ಹೇರಿಲ್ಲ. ನಿಷ್ಪಕ್ಷಪಾತ ತನಿಕೆ ನಡೆಸಲಾಗುತ್ತಿದೆ. ತನಿಖಾ ತಂಡದ ಮೇಲೆ ಯಾವುದೇ ಒತ್ತಡ ಹೇರಿಲ್ಲ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಕೇಂದ್ರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ. ಈಗಾಗಲೇ ದೆಹಲಿ ಪೊಲೀಸರು ನಿಷ್ಪಕ್ಷಪಾತ ವಿಚಾರಣೆ ನಡೆಸುತ್ತಿದ್ದಾರೆ. ಇದರಲ್ಲಿ ರಾಜಕೀಯದ ಹುನ್ನಾರವಿಲ್ಲ ಎಂದು ಹೇಳಿದ್ದಾರೆ.
ದೆಹಲಿ ಸರೋಜಿನಿ ನಗರ ಪೊಲೀಸರು ಸುನಂದಾ ಪುಷ್ಕರ್ ಅಸಹಜ ಸಾವು ಎಂದು ಹೇಳಿದ್ದು, ಪ್ರಕರಣವನ್ನು ಐಪಿಸಿ 302 ಅಡಿ ಕೊಲೆ ಎಂದು ದಾಖಲಿಸಿಕೊಂಡಿದ್ದರು. ಎಫ್‌ಐಆರ್‌ನಲ್ಲಿ ಯಾರ ಹೆಸರನ್ನು ಪ್ರಸ್ತಾಪಿಸದೇ, ಅಪರಿಚಿತ ವ್ಯಕ್ತಿಗಳಿಂದ ಕೊಲೆ ನಡೆದಿದೆ ಎಂದು ನಮೂದಿಸಿಕೊಂಡಿದ್ದರು.
ದೆಹಲಿ ಉಪ ಪೊಲೀಸ್ ಆಯುಕ್ತ ಪ್ರೇಮನಾಥ್ ಉಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ)ವನ್ನು ರಚಿಸಿದ್ದು, ತನಿಖೆ ಕೈಗೊಂಡಿದೆ.
ಕಳೆದ ಜನವರಿ 17ರಂದು ದೆಹಲಿಯ ಪಂಚತಾರಾ ಹೋಟೆಲೊಂದರಲ್ಲಿ 52 ವರ್ಷದ ಸುನಂದಾ ಶಂಕಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಡಿ.29ರಂದು ನೀಡಿರುವ ಅಂತಿಮ ವೈದ್ಯಕೀಯ ವರದಿ 'ಸುನಂದಾ ವಿಷ ಪ್ರಾಶನದಿಂದ ಸಾವನ್ನಪ್ಪಿದ್ದು ಅಸಹಜ ಸಾವು' ಎಂದು ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


