ಯೋಧರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ
ದೇಶದ ಗಡಿಕಾಯುವ ಯೋಧರ ಧೈರ್ಯ, ಶೌರ್ಯದ ಬಗ್ಗೆ ನಮಗೆ ಹೆಮ್ಮೆಯಿದೆ ಎಂದು...

ನವದೆಹಲಿ: ದೇಶದ ಗಡಿಕಾಯುವ ಯೋಧರ ಧೈರ್ಯ, ಶೌರ್ಯದ ಬಗ್ಗೆ ನಮಗೆ ಹೆಮ್ಮೆಯಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
67ನೇ ಯೋಧರ ದಿನಾಚರಣೆ ಕುರಿತಂತೆ ಗುರುವಾರ ಟ್ವಿಟರ್‌ನಲ್ಲಿ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ಮೋದಿ, ಯೋಧರ ಧೈರ್ಯ ಮತ್ತು ಕಠಿಣ ಸಮಯದಲ್ಲಿ ಅವರು ತೆಗೆದುಕೊಳ್ಳುವ ನಿರ್ಧಾರ ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸುವ ಅವರ ಮನೋಭಾವವನ್ನು ಎಷ್ಟು ಅಭಿನಂದಿಸಿದರೂ ಸಾಲದು. ಅವರ ತ್ಯಾಗದ ಕುರಿತಂತೆ ದೇಶಕ್ಕೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ನವದೆಹಲಿಯ ಅಮರ್ ಜವಾನ್ ಜ್ಯೋತಿಯಲ್ಲಿ ಜನವರಿ 15ರ ದಿನವನ್ನು ಸೇನಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದ್ದು, ಸೇನಾ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಸುಹಾಗ್, ನೌಕಾ ಸೇನಾ ಮುಖ್ಯಸ್ಥ ಅಡ್ಮಿರಲ್ ರಾಬಿನ್ ಕೆ ಧೋವನ್ ಹಾಗೂ ಏರ್ ಚೀಫ್ ಮಾರ್ಷಲ್ ಅರುಪ್ ರಹಾ ಅವರು ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


