ಗಣರಾಜ್ಯೋತ್ಸವಕ್ಕೆ ನಗರದಲ್ಲಿ ಬಿಗಿ ಭದ್ರತೆ
ಚರ್ಚ್ ಸ್ಚ್ರೀಟ್‌ನಲ್ಲಿ ಸಂಭವಿಸಿದ ಸ್ಫೋಟ ಹಾಗೂ ಶಂಕಿತ ಉಗ್ರರ ಬಂಧನ ಹಿನ್ನೆಲೆಯಲ್ಲಿ...

ಬೆಂಗಳೂರು: ಚರ್ಚ್ ಸ್ಚ್ರೀಟ್‌ನಲ್ಲಿ ಸಂಭವಿಸಿದ ಸ್ಫೋಟ ಹಾಗೂ ಶಂಕಿತ ಉಗ್ರರ ಬಂಧನ ಹಿನ್ನೆಲೆಯಲ್ಲಿ, ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬಿಗಿ ಬಂದೋಬಸ್ತ್ ಕೈಗೊಂಡಿರುವ ಪೊಲೀಸರು ಈಗಾಗಲೇ ಮೈದಾನದ ಮೇಲೆ ನಿಗಾ ಇರಿಸಿದ್ದಾರೆ.
ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈಗಾಗಲೇ 12 ಪೊಲೀಸರನ್ನು ನಿಯೋಜಿಸಲಾಗಿದೆ. ನಿರಂತರವಾಗಿ ಪೊಲೀಸ್ ಗಸ್ತು ನಡೆಯುತ್ತಿದೆ. ಮೈದಾನ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ ಎಂದು ಕೇಂದ್ರ ವಿಭಾಗ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದರು.
ಬಿಬಿಎಂಪಿ ಅಧಿಕಾರಿಗಳು ಕೆಲಸದಲ್ಲಿ ತೊಡಗಿದ್ದು ಅವರಿಗೆ ಐಡಿ ಕಾರ್ಡ್ ನೀಡಲಾಗಿದ್ದು ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಲಾಗಿದೆ. ಮೈದಾನಕ್ಕೆ ತೆರಳಲು ಅವರು ಐಡಿ ಕಾರ್ಡ್ ತೋರಿಸಬೇಕು. ಸದ್ಯಕ್ಕೆ 6 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ವಿಡಿಯೋ ಮೇಲೆ ನಿಗಾ ಇರಿಸಲಾಗುತ್ತದೆ. ಮೈದಾನದ ಹೊರಗೆ ಹಾಗೂ ಒಳಗೆ ಇನ್ನೂ 10 ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ ಎಂದರು.
ಮೈದಾನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್‌ಸ್ಟ್ರೀಟ್ ಸುತ್ತಮುತ್ತಲಿನ ರಸ್ತೆಗಳಲ್ಲಿ ನಿಗಾ ಇರಿಸಲಾಗಿದ್ದು ಶ್ವಾನದಳ ತಪಾಸಣೆ ನಡೆಸುತ್ತಿವೆ.
ಆಯುಕ್ತರಿಂದ ಸಭೆ
ನಗರದ ಹೋಟೆಲ್ ಮಾಲೀಕರ ಸಂಘ ಹಾಗೂ ಲಾಡ್ಜ್‌ಗಳ ಮಾಲೀಕರ ಸಂಘದ ಸದಸ್ಯರೊಂದಿಗೆ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಬುಧವಾರ ಸಭೆ ನಡೆಸಿದರು.
ಲಾಡ್ಜ್‌ಗಳಲ್ಲಿ ಉಳಿದುಕೊಳ್ಳುವ ಪ್ರತಿಯೊಬ್ಬರ ಮೇಲೆ ನಿಗಾ ಇರಿಸಬೇಕು. ಅವರ ಹೆಸರು, ವಿಳಾಸ ಮಾಹಿತಿ ಜತೆಗೆ ಗುರುತಿನ ಚೀಟಿ ಪರಿಶೀಲಿಸಬೇಕು. ಅನುಮಾನಾಸ್ಪದ ನಡವಳಿಕೆ ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಪ್ರವೇಶ ದ್ವಾರಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯವಾಗಿ ಇರಬೇಕು ಎಂದು ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


