ದೇಶ

ಸರಗಳ್ಳರ ಮೇಲೆ ರೌಡಿ ಪಟ್ಟಿ ಖಚಿತ

ಒಂಟಿಯಾಗಿ ಓಡಾಡುವ ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಮೂವರನ್ನು ಬಂಧಿಸಿರುವ...

ಸರಗಳ್ಳರ ಮೇಲೆ ರೌಡಿ ಪಟ್ಟಿ ಖಚಿತ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಒಂಟಿಯಾಗಿ ಓಡಾಡುವ ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಮೂವರನ್ನು ಬಂಧಿಸಿರುವ ಎಚ್‌ಎಎಲ್ ಪೊಲೀಸರು, ಇವರ ಮೇಲೆ ರೌಡಿ ಶೀಟ್ ತೆರೆಯಲು ಸಿದ್ಧತೆ ನಡೆಸಿದ್ದಾರೆ.

ಮೈಸೂರು ರಸ್ತೆ ವಿನಾಯಕ ಗಾರ್ಡನ್ ನಿವಾಸಿ ಯೂನಸ್(25), ಪಾದರಾಯನ ಪುರದ ಅಪ್ರೋಜ್ ಖಾನ್ (27) ಹಾಗೂ ಇಫ್ತಿಯಾರ್ ಪಾಷಾ (29) ಬಂಧಿತರು. ಈ ಆರೋಪಿಗಳ ವಿಚಾರಣೆಯಿಂದ 11 ಪ್ರಕರಣಗಳು ಪತ್ತೆಯಾಗಿದ್ದು 13 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್, ಬೈಕ್ ಮತ್ತು ಆಟೋ ವಶಕ್ಕೆ ಪಡೆಯಲಾಗಿದೆ. ಈ ಪೈಕಿ 9 ಸರಗಳ್ಳತನ ಪ್ರಕರಣಗಳು ಎಂದು ಆಗ್ನೇಯ ವಿಭಾಗ ಡಿಸಿಪಿ ಡಾ.ರೋಹಿಣಿ ಕಟೋಚ್ ಸೆಪಟ್ ತಿಳಿಸಿದ್ದಾರೆ.

ಹೊಸ ಬಡಾವಣೆಗಳಲ್ಲಿ ಒಂಟಿಯಾಗಿ ಓಡಾಡುವ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ ಖದೀಮರು ಪಲ್ಸರ್ ಬೈಕ್‌ನಲ್ಲಿ ಬಂದು ಚಿನ್ನದ ಸರ ದೋಚುತ್ತಿದ್ದರು. ಆಟೋ ಚಾಲಕನಾಗಿರುವ ಇಫ್ತಿಯಾರ್, ಬಾಡಿಗೆ ನೆಪದಲ್ಲಿ ಪ್ರಯಾಣಿಕರನ್ನು ರಿಕ್ಷಾಗೆ ಹತ್ತಿಸಿಕೊಳ್ಳುತ್ತಿದ್ದ. ನಂತರ ಮಾರ್ಗ ಮಧ್ಯೆ ಯೂನಸ್ ಮತ್ತು ಅಫ್ರೋಜ್ ಖಾನ್‌ನನ್ನು ರಿಕ್ಷಾಗೆ ಏರಿಸಿಕೊಳ್ಳುತ್ತಿದ್ದ. ನಿರ್ಜನ ಪ್ರದೇಶಕ್ಕೆ ಆಟೋ ತೆಗೆದುಕೊಂಡು ಹೋಗಿ ಪ್ರಯಾಣಿಕರಿಗೆ ಮಾರಕಾಸ್ತ್ರಗಳಿಂದ ಬೆದರಿಸಿ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದರು.

ಕದ್ದ ಚಿನ್ನಾಭರಣ ಮತ್ತು ಹಣವನ್ನು ಮೂವರೂ ಹಂಚಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದರು. ಆರೋಪಿಗಳು ಏರ್‌ಪೋರ್ಟ್, ವರ್ತೂರು, ವೈಟ್ ಫೀಲ್ಡ್, ಮಡಿವಾಳ, ಕೋರಮಂಗಳ, ತಿಲಕ್‌ನಗರ, ಮೈಕೋ ಲೇಔಟ್ ಮತ್ತು ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ 11 ಸುಲಿಗೆ, ಸರ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಸರಗಳ್ಳತನ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಮಂಗಳವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು, ಸರ ಅಪಹರಣಕಾರರಿಗೆ ಕಡಿವಾಣ ಹಾಕುವ ಸಲುವಾಗಿ ಬಂಧಿತರ ವಿರುದ್ಧ ರೌಡಿಪಟ್ಟಿ ತೆರೆಯುವುದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.