ದೆಹಲಿ ಚರ್ಚ್ ದಾಳಿ ಪ್ರಕರಣ: ಮೂವರು ಬಂಧನ
ಮೇರಿ ಮಾತೆಯ ಪುತ್ಥಳಿಯನ್ನು ಹಾನಿ ಮಾಡಿದ ಪ್ರಕರಣ...

ನವದೆಹಲಿ: ದೆಹಲಿಯ ಚರ್ಚ್‌ನಲ್ಲಿ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ, ಮೇರಿ ಮಾತೆಯ ಪುತ್ಥಳಿಯನ್ನು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನವದೆಹಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ದೆಹಲಿಯ ವಿಕಾಸಪುರಿಯಲ್ಲಿನ ಅವರ್ ಲೇಡಿ ಆಫ್ ಗ್ರೇಸಸ್ ಚರ್ಚ್ ಮೇಲೆ ದುಷ್ಕರ್ಮಿಗಳ ಗುಂಪೊಂದು, ನೆನ್ನೆ ಬೆಳಿಗ್ಗೆ ದಾಳಿ ನಡೆಸಿತು. ಈ ವೇಳೆ ಚರ್ಚ್‌ನ ಕಿಟಕಿಗಾಜುಗಳನ್ನು ಪುಡಿಪುಡಿ ಮಾಡಿದರಲ್ಲದೆ, ಮೇರಿ ಮಾತೆಯ ಪುತ್ಥಳಿಯನ್ನು ಹಾನಿ ಮಾಡಿ ಪರಾರಿಯಾಗಿದ್ದರು.
ಈ ಸಂಬಂಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಿಗಾಗಿ ಜಾಲ ಬೀಸಿದರು. ಚರ್ಚ್‌ನಲ್ಲಿದ್ದ ಸಿಸಿಟಿವಿಯಲ್ಲಿ ದುಷ್ಕರ್ಮಿಗಳು ದಾಳಿ ಮಾಡುತ್ತಿದ್ದ ದೃಶ್ಯಗಳು ಕ್ಯಾಮೆರಾನಲ್ಲಿ ಸೆರಯಾಗಿದ್ದವು. ಸಿಸಿಟಿವಿ ದೃಶ್ಯಗಳನ್ನು ವಶಪಡಿಸಿಕೊಂಡಿದ್ದ ಪೊಲೀಸರು ಆರೋಪಿಗಳನ್ನು ಖೆಡ್ಡಾಕೆ ಕೆಡವಲು ಕಾರ್ಯಾಚರಣೆ ಕೈಗೊಂಡಿದ್ದರು.
ಈ ಪ್ರಕರಣದ ಸಂಬಂಧ ಸಿಸಿಟಿವಿಯಲ್ಲಿ ಸೆರೆಯಾಗಿದ್ದ ವ್ಯಕ್ತಿಗಳ ಪೈಕಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಮತ್ತೊಬ್ಬ ಯುವಕ ಕಾಣಿಸಿಕೊಂಡಿದ್ದು, ಆತನೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾನೆಯೇ ಅಥವಾ ಚರ್ಚ್ ದಾಳಿಯನ್ನು ತಡೆಯಲು ಬಂಧಿದ್ದನೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


