ದೇಶ

ತಾಜ್‌ಮಹಲ್‌ಗೆ 'ಬರಾಕ್ ಒಬಾಮ'

ಎಲ್ಲ ಅಂಗಡಿ ಮುಚ್ಚಾರೆ!...

ತಾಜ್‌ಮಹಲ್‌ಗೆ 'ಬರಾಕ್ ಒಬಾಮ'
ಒಬಾಮ ಭೇಟಿ ಹಿನ್ನೆಲೆ ಬಿಗಿ ಭದ್ರತೆ
Published On :

ನವದೆಹಲಿ/ಆಗ್ರಾ: ಗಣರಾಜ್ಯೋತ್ಸವದ ವಿಶೇಷ ಅತಿಥಿಯಾಗಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಜ.27 ರಂದು ಆಗ್ರಾಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ದೆಹಲಿ-ಆಗ್ರಾ ಹೆದ್ದಾರಿಯ ಇಕ್ಕೆಲೆಗಳಲ್ಲಿರುವ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತೆ ದೆಹಲಿಯಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಕೇಂದ್ರಕ್ಕೆ ಮನವಿ ಮಾಡಿದೆ.

ರಸ್ತೆ ಮಾರ್ಗವಾಗಿ ಒಬಾಮ ಆಗ್ರಾಕ್ಕೆ ತೆರಳುವ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಬೇಕೆಂದು ರಾಯಭಾರ ಕಚೇರಿ ಒತ್ತಾಯಿಸಿದೆ.

ಇದರ ಜತೆಗೆ ಜ.24, 25ರಂದು ಕೇಂದ್ರ ದೆಹಲಿಯಲ್ಲಿರುವ ಲ್ಯೂಟನ್ಸ್ ಪ್ರದೇಶವನ್ನೂ ಬಂದ್ ಮಾಡಬೇಕೆಂದು ಅಮೆರಿಕ ಅಧಿಕಾರಿಗಳು ಸೂಚಿಸಿದ್ದಾರೆ. ಅದರ ಜತೆಗೆ ಕೇಂದ್ರ ಸರ್ಕಾರದ ಎಲ್ಲ ಭವನಗಳನ್ನು ಆ ಎರಡು ದಿನಗಳ ಕಾಲ ಮುಚ್ಚುವಂತೆ ಸೂಚಿಸಲಾಗಿದೆ.

ಶುಕ್ರವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಇದರ ಜತೆಗೆ ಇಂಡಿಯಾ ಗೇಟ್, ರಫೀ ಮಾರ್ಗ್ ಮತ್ತು ಇತರ ಪ್ರದೇಶಗಳನ್ನು 24ರಿಂದಲೇ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಬೇಕೆಂದು ಅಮೆರಿಕ ಅಧಿಕಾರಿಗಳು ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.