ದೇಶ

ಎಚ್‌ಎಎಲ್ ವಿಮಾನ ನಿಲ್ದಾಣ ಪುನಾರಂಭ?

ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣ ಪುನಾರಂಭಿಸುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಖುದ್ದು ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಅವರು...

ಎಚ್‌ಎಎಲ್ ವಿಮಾನ ನಿಲ್ದಾಣ ಪುನಾರಂಭ?
ಮನೋಹರ್ ಪರ್ರಿಕರ್
Published On :

ನವದೆಹಲಿ: ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣ ಪುನಾರಂಭಿಸುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಖುದ್ದು ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಅವರು ನಾಗರಿಕ ವಿಮಾನ ಯಾನ ಖಾತೆ ಸಚಿವ ಅಶೋಕ ಪಶುಪತಿ ಗಜಪತಿ ರಾಜು ಅವರಿಗೆ ಪತ್ರ ಬರೆದಿದ್ದಾರೆ.

ಎಚ್‌ಎಎಲ್ ವಿಮಾನ ನಿಲ್ದಾಣ ಬೆಂಗಳೂರು ನಗರಕ್ಕೆ ಸಮೀಪದಲ್ಲಿದ್ದು, ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಏರ್‌ಪೋರ್ಟ್ ಮುಚ್ಚಿದ ಬಳಿಕ ಎಚ್‌ಎಎಲ್‌ಗೆ ತೀವ್ರ ಆದಾಯ ನಷ್ಟವಾಗುತ್ತಿದೆ ಎಂದು ಪರ್ರಿಕರ್ ಕಳೆದ ಡಿ. 8ಕ್ಕೆ ಬರೆದ ಪತ್ರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಡಳಿ(ಹಿಂದಿನ ಬಿಐಎಎಲ್) ಹೊಸ ಏರ್‌ಪೋರ್ಟ್ ಸುತ್ತಲಿನ 150 ಕಿಮಿ ವ್ಯಾಪ್ತಿಯಲ್ಲಿ ಯಾವುದೇ ಹೊಸ ಏರ್‌ಪೋರ್ಟ್ ಇರುವಂತಿಲ್ಲ ಎಂದು ಷರತ್ತು ವಿಧಿಸಿತ್ತು ಎಂದು ವಿಮಾನಯಾನ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯ ಅದನ್ನು ರಕ್ಷಣಾ ಇಲಾಖೆ ಉಪಯೋಗಕ್ಕಷ್ಟೇ ಬಳಸಲಾಗುತ್ತಿದೆ.

ನಷ್ಟವಾಗುತ್ತಿದೆ: ವಿಮಾನ ನಿಲ್ದಾಣವನ್ನು ಮುಚ್ಚಿದ್ದರಿಂದ ಎಚ್‌ಎಎಲ್‌ಗೆ ವಾರ್ಷಿಕವಾಗಿ ರು. 1,700 ಕೋಟಿ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ರು. 700 ಕೋಟಿ ನಷ್ಟವಾಗುತ್ತಿದೆ ಎಂದು ಸಂಸ್ಥೆ ಅಧ್ಯಕ್ಷ ಆರ್.ಕೆ. ತ್ಯಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.