ದೆಹಲಿಯಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು..

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ನಗರದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳ ರವಾನೆ ಕುರಿತು ಖಚಿತ ಮಾಹಿತಿ ಪಡೆದ ದೆಹಲಿ ಪೊಲೀಸರ ವಿಶೇಷ ತಂಡ ದೆಹಲಿಯ ನಿವಾಸವೊಂದರ ಮೇಲೆ ದಾಳಿ ಮಾಡಿ, ಸುಮಾರು ಸಾವಿರಕ್ಕೂ ಅಧಿಕ ಜೀವಂತ ಬುಲೆಟ್‌ಗಳ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತರನ್ನು ಸೀತಾಪುರ ನಿವಾಸಿ ಮಹಮದ್ ಇಮ್ರಾನ್, ಮೀರತ್ ಮೂಲದ ಶರೀಖ್ ಮತ್ತು ಉತ್ತರಾಖಂಡದ ಫಾಹೀಮ್ ಎಂದು ಗುರುತಿಸಲಾಗಿದೆ. ದೆಹಲಿ ಮೆಟ್ರೋ ನಿಲ್ದಾಣದ ಬಳಿಯಲ್ಲಿಯ ಕೊಠಡಿಯಲ್ಲಿ ಇವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸ್ ವರಿಷ್ಠಾಧಿಕಾರಿ ಎಸ್‌ಎನ್ ಶ್ರೀವಾತ್ಸವ ಅವರು, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕುರಿತು ದೊರೆತ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ 1 ಸಾವಿರದ 20 ಜೀವಂತ ಬುಲೆಟ್‌ಗಳ ಕಾರ್ಟ್ರಿಡ್ಜ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅಲ್ಲದೆ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಗಣರಾಜ್ಯೋತ್ಸವ ದಿನಾಚರಣೆಗೆ ಇನ್ನು ಕೆಲವೇ ದಿನಗಳಿದ್ದು, ಈ ವೇಳೆ ಉಗ್ರರ ದಾಳಿ ಕುರಿತು ಈಗಾಗಲೇ ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ಈ ಹಂತದಲ್ಲಿ ದೆಹಲಿಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪ್ರಕರಣವನ್ನು ಭದ್ರತಾ ಸಂಸ್ಥೆಗಳು ಮತ್ತು ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಕೋನಗಳಲ್ಲಿಯೂ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


