ವಿನೋದ್ ಕುಮಾರ್ ಬಿನ್ನಿ ಬಿಜೆಪಿ ಸೇರ್ಪಡೆ
ಆಮ್ ಆದ್ಮಿ ಪಕ್ಷದ ಮಾಜಿ ಮುಖಂಡ ವಿನೋದ್ ಕುಮಾರ್ ಬಿನ್ನಿ ಅವರು ಭಾನುವಾರ ಬಿಜೆಪಿ ಪಕ್ಷಕ್ಕೆ..

ನವದೆಹಲಿ: ಆಮ್ ಆದ್ಮಿ ಪಕ್ಷದ ಮಾಜಿ ಮುಖಂಡ ವಿನೋದ್ ಕುಮಾರ್ ಬಿನ್ನಿ ಅವರು ಭಾನುವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ವಿನೋದ್ ಕುಮಾರ್ ಅವರನ್ನು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಾಕ್ಷ ಸತೀಶ್ ಉಪಾಧ್ಯಾಯ ಅವರು ಬರಮಾಡಿಕೊಂಡರು. ಬಳಿಕ ಮಾತನಾಡಿದ ವಿನೋದ್ ಕುಮಾರ್ ಅವರು, 'ಭ್ರಷ್ಟಾಚಾರ ವಿರೋಧಿ ಹೊರಾಟಕ್ಕಾಗಿ ನಾನು ಈ ಹಿಂದೆ ಆಮ್ ಆದ್ಮಿ ಪಕ್ಷವನ್ನು ಸೇರಿದ್ದೆ. ಆದರೆ ಆ ಪಕ್ಷದ ಹೋರಾಟಗಳೆಲ್ಲವೂ ನಾಟಕ ಎಂದು ತಿಳಿದಾಗ ಪಕ್ಷದ ವಿರುದ್ಧ ಧನಿ ಎತ್ತಿದೆ. ಈಗ ಆ ಪಕ್ಷ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ಆ ಬಗ್ಗೆ ಜನರಲ್ಲಿ ಬಿಜೆಪಿ ಪರವಾಗಿ ಜಾಗೃತಿ ಮೂಡಿಸುತ್ತೇನೆ' ಎಂದು ವಿನೋದ್ ಕುಮಾರ್ ಹೇಳಿದ್ದಾರೆ.
ಈ ಹಿಂದೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸಿದ್ದ ವಿನೋದ್ ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅಶೋಕ್ ಕುಮಾರ್ ಅವರನ್ನು ಸುಮಾರು 8 ಸಾವಿರ ಮತಗಳ ಅಂತರದಿಂದ ಸೋಲಿಸುವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದರು. ಆ ಬಳಿಕ ಆಪ್ ಪಕ್ಷದಲ್ಲಿ ನಡೆದ ಆಂತರಿಕ ಕಲಹದಿಂದಾಗಿ ವಿನೋದ್ ಕುಮಾರ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು. ವಿನೋದ್ ಕುಮಾರ್ ಅವರು ಪಕ್ಷದಲ್ಲಿನ ಆಂತರಿಕ ವಿಚಾರಗಳ ಕುರಿತು ಬಹಿರಂಗವಾಗಿ ಪ್ರಶ್ನೆ ಎತ್ತಿದ್ದರು.
ಅಲ್ಲದೆ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಅವರ ನಿರ್ಧಾರಗಳನ್ನು ವಿನೋದ್ ಕುಮಾರ್ ಅವರು ಬಹಿರಂಗವಾಗಿಯೇ ಟೀಕಿಸಿದ್ದರು. ವಿನೋದ್ ಕುಮಾರ್ ಅವರ ನಡವಳಿಕೆಯಿಂದ ಆಪ್ ಪಕ್ಷ ತೀವ್ರ ಮುಜುಗರ ಅನುಭವಿಸುವಂತಾಗಿತ್ತು. ಹೀಗಾಗಿ ಅವರನ್ನು ಆಪ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


