ದೇಶ

'ಡಿಮ್ಯಾಂಡ್ ಮಾಡಿ ಹಣ ಪಡೆಯಿರಿ': ಮತದಾರರಿಗೆ ಕೇಜ್ರಿ ಸಲಹೆ

ದೆಹಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾನುವಾರ ಉತ್ತಮ್ ನಗರದಲ್ಲಿ ನಡೆದ ಬೃಹತ್...

'ಡಿಮ್ಯಾಂಡ್ ಮಾಡಿ ಹಣ ಪಡೆಯಿರಿ': ಮತದಾರರಿಗೆ ಕೇಜ್ರಿ ಸಲಹೆ
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ)
Published On :

ನವದೆಹಲಿ: ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಂದ ಹಣ ಪಡೆಯಿರಿ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾನುವಾರ ಉತ್ತಮ್ ನಗರದಲ್ಲಿ ನಡೆದ ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ಧ ಕಿಡಿಕಾರಿದರು.

'ಹಲವು ವರ್ಷಗಳಿಂದ ರಾಜಕೀಯದಲ್ಲಿರುವ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಮತದಾರರಿಗೆ ಮೋಸ ಮಾಡಿದ್ದು, ಸಾರ್ವಜನಿಕರ ಹಣವನ್ನು ಅವು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿವೆ. ಹೀಗಾಗಿ ಆ ಪಕ್ಷಗಳು ನೀಡುವ ಹಣವನ್ನು ಯಾವುದೇ ಮುಲಾಜಿಲ್ಲದೇ ತೆಗೆದುಕೊಳ್ಳಿ. ಖಂಡಿತವಾಗಿಯೂ ಆ ಪಕ್ಷಗಳ ಕಾರ್ಯಕರ್ತರು ಹಣವನ್ನು ಹಂಚಲು ನಿಮ್ಮ ಬಳಿ ಬಂದೇ ಬರುತ್ತಾರೆ. ಆಗ ಅವರಿಂದ ಹಣವನ್ನು ಪಡೆದುಕೊಳ್ಳಿ. ಆದರೆ ಮತ ಮಾತ್ರ ಆಮ್ ಆದ್ಮಿ ಪಕ್ಷಕ್ಕೇ ನೀಡಿ' ಎಂದು ಕೇಜ್ರಿವಾಲ್ ಅವರು ಹೇಳಿದ್ದಾರೆ.

'ಕೇಂದ್ರದ ಎನ್‌ಡಿಎ ಸರ್ಕಾರ ಯೂಟರ್ನ್ ಸರ್ಕಾರವಾಗಿದ್ದು, ಲೋಕಸಭಾ ಚುನಾವಣೆಗೂ ಮೊದಲು ಬಿಜೆಪಿ ಮುಖಂಡರು ನೀಡಿದ್ದ ಭರವಸೆಗಳನ್ನು ಮರೆತುಹೋಗಿದ್ದಾರೆ. ಎನ್‌ಡಿಎ ಸರ್ಕಾರದಿಂದ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷ ಕೂಡ ಇದನ್ನೇ ಮಾಡಿದ್ದು, ಈ ಎರಡೂ ಪಕ್ಷಗಳು ಸರಿಯಲ್ಲ. ಈ ಎರಡೂ ಪಕ್ಷಗಳು ಚುನಾವಣೆಯಲ್ಲಿ ಖರ್ಚು ಮಾಡುತ್ತಿರುವುದು ಸಾರ್ವಜನಿಕರ ಹಣವನ್ನೇ. ಹೀಗಾಗಿ ಆ ಪಕ್ಷಗಳಿಂದ ಹಣ ಪಡೆಯುವುದರಲ್ಲಿ ತಪ್ಪೇನಿಲ್ಲ. ಆದರೆ ಆಮ್ ಆದ್ಮಿ ಪಕ್ಷ ಕೇವಲ 49 ದಿನಗಳ ಅವಧಿಯಲ್ಲೇ ಉತ್ತಮ ಆಡಳಿತ ನೀಡಿತ್ತು. ಅವೈಜ್ಞಾನಿಕ ವಿದ್ಯುತ್ ದರ ವ್ಯವಸ್ಥೆ ಮೇಲೆ ನಿಯಂತ್ರಣ ಹೇರುವ ಮೂಲಕ ವಿದ್ಯುತ್ ದರವನ್ನು ಕಡಿತಗೊಳಿಸಿತ್ತು. ಹೀಗಾಗಿ ಆಮ್ ಆದ್ಮಿ ಪಕ್ಷಕ್ಕೇ ಬೆಂಬಲ ನೀಡಿ' ಎಂದು ಕೇಜ್ರಿವಾಲ್ ಹೇಳಿದರು.

ಒಟ್ಟಾರೆ ದೆಹಲಿ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು, ರಾಜಕೀಯ ನಾಯಕರ ಹೇಳಿಕೆಗಳು ವಿವಾದಕ್ಕೆ ಎಡೆಮಾಡಿಕೊಡುತ್ತಿವೆ. ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ರಾಜಕೀಯಕ್ಕೆ ಬಂದ ಅರವಿಂದ್ ಕೇಜ್ರೀವಾಲ್ ಅವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಮತದಾರರಿಗೆ ಯಾವ ರೀತಿಯ ಸಂದೇಶ ನೀಡುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.