ದೇಶ

ವ್ಯಂಗ್ಯ ಚಿತ್ರಕಾರ ಆರ್.ಕೆ ಲಕ್ಷ್ಮಣ್ ಆರೋಗ್ಯ ಸ್ಥಿತಿ ಚಿಂತಾಜನಕ

ವ್ಯಂಗ್ಯ ಚಿತ್ರಕಾರ ಆರ್.ಕೆ ಲಕ್ಷ್ಮಣ್ ಆರೋಗ್ಯ ಸ್ಥಿತಿ ಚಿಂತಾಜನಕ
ಆರ್.ಕೆ ಲಕ್ಷ್ಮಣ್
Published On :

ಪುಣೆ: ಖ್ಯಾತ ವ್ಯಂಗ್ಯ ಚಿತ್ರಕಾರ, ಮೈಸೂರು ಮೂಲದ ಆರ್.ಕೆ ಲಕ್ಷ್ಮಣ್(94) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಮೂತ್ರಪಿಂಡ ಸೋಂಕಿನಿಂದ ಬಳಲುತ್ತಿದ್ದ ಲಕ್ಷ್ಮಣ್‌ರನ್ನು ಶನಿವಾರ ಪುಣೆಯ ದೀನನಾಥ್ ಮಂಗೇಷ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ಲಕ್ಷ್ಮಣ್‌ರಿಗೆ ಬಹು ಅಂಗ ವೈಫಲ್ಯವಾಗಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಶನಿವಾರ ಅವರಿಗೆ ಡಯಾಲಿಸಿಸ್ ಮಾಡಲಾಗಿತ್ತು. ಆರ್.ಕೆ ಲಕ್ಷ್ಮಣ್ ಅವರು ಈ ಹಿಂದೆಯೇ ಶ್ವಾಸಕೋಶದ ಸೋಂಕು, ಮೂತ್ರಪಿಂಡ ಸಮಸ್ಯೆ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದರು. 2010ರಲ್ಲಿ ಅವರಿಗೆ ಪಾರ್ಶ್ವವಾಯು ಆಗಿತ್ತು ಎಂದು ಡಾ. ಸಮೀರ್ ಜೋಗ್ ತಿಳಿಸಿದ್ದಾರೆ. ಇಷ್ಟೆಲ್ಲ ಆರೋಗ್ಯ ಸಮಸ್ಯೆಗಳಿದ್ದರೂ ಲಕ್ಷ್ಮಣ್ ಅವರು ವ್ಯಂಗ್ಯಚಿತ್ರ ಬರೆಯುವುದನ್ನು ನಿಲ್ಲಿಸಿರಲಿಲ್ಲ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.