ಕೇಜ್ರಿವಾಲ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಇತ್ತಿಚೀಗಷ್ಟೆ ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಚುನಾವಣಾ ಆಯೋಗದಿಂದ ನೋಟಿಸ್ ಪಡೆದಿದ್ದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್...

ನವದೆಹಲಿ: ಇತ್ತಿಚೀಗಷ್ಟೆ ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಚುನಾವಣಾ ಆಯೋಗದಿಂದ ನೋಟಿಸ್ ಪಡೆದಿದ್ದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಈಗ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಹಣ ಪಡೆದು ನಮಗೆ ಮತ ನೀಡಿ ಎಂದು ಹೇಳಿದ್ದ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ನಿನ್ನೆ ದೆಹಲಿಯ ಉತ್ತಮ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಕೇಜ್ರಿವಾಲ್ ಅವರು, 'ನೀವು ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಹಣವನ್ನು ಪಡೆಯಿರಿ. ಆದರೆ ಮತವನ್ನು ಮಾತ್ರ ಆಮ್ ಆದ್ಮಿ ಪಕ್ಷಕ್ಕೆ ಹಾಕಿ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕೇನ್ ಅವರು, ಈ ಕುರಿತು ಕಾನೂನು ಸಲಹೆ ಪಡೆದು ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ವರದಿಗಾರರಿಗೆ ತಿಳಿಸಿದ್ದರು. ಅಲ್ಲದೆ ಈ ಕುರಿತು ಕೇಜ್ರಿವಾಲ್ ಅವರು ದೆಹಲಿ ಜನತೆಯ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


