ಕಾಂಗ್ರೆಸ್ ನಾಯಕ ಪಿ. ವೆಂಕಟ ರಾವ್ ನಿಧನ
ಧೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಆಂಧ್ರಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಪಲದುಡು...

ವಿಜಯವಾಡ: ಧೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಆಂಧ್ರಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಪಲದುಡು ವೆಂಕಟ ರಾವ್(75) ಅವರು ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೆಂಕಟ ರಾವ್ ಅವರು, ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ವೆಂಕಟ ರಾವ್ ಅವರು ಚಿಕಿತ್ಸೆಗೆ ಸ್ಪಂಧಿಸದ ಕಾರಣ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
1968ರಲ್ಲಿ ಯುವಜನ ಕಾಂಗ್ರೆಸ್‌ಗೆ ಸೇರಿದ ಇವರು ನೂಜಿವೀಡು ಶಾಸನಸಭೆ ಸ್ಥಾನದಲ್ಲಿ 2 ಬಾರಿ ಜಯ ಸಾಧಿಸಿದ್ದರು. 1978ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಇಂಧನ ಸಚಿವರಾಗಿದ್ದರು. ನಂತರ ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.
ವೆಂಕಟ ರಾವ್ ಅವರ ಆಕಸ್ಮಿಕ ಸಾವಿಗೆ ಕಾಂಗ್ರೆಸ್ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಈಗಾಗಲೇ ಹಲವು ಮುಖಂಡರು ಆಸ್ಪತ್ರೆಯತ್ತ ಧಾವಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


