ದೇಶ

ಸುನಂದಾ ಸಾವು ಪ್ರಕರಣ: ಶಶಿ ತರೂರ್‌ಗೆ ನೋಟೀಸ್

ಪತ್ನಿ ಸುನಂದಾ ಪುಷ್ಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಶಶಿ ತರೂರ್ ಅವರಿಗೆ ದೆಹಲಿ ಪೋಲೀಸರು ಸೋಮವಾರ ನೋಟೀಸ್ ನೀಡಿದ್ದಾರೆ. ದೆಹಲಿ ಪೊಲೀಸ್ ಆಯುಕ್ತ ಬಿಎಸ್. ಬಸ್ಸಿ ಅವರು...

ಸುನಂದಾ ಸಾವು ಪ್ರಕರಣ: ಶಶಿ ತರೂರ್‌ಗೆ ನೋಟೀಸ್
ಸುನಂದಾ ಪುಷ್ಕರ್ ಮತ್ತು ಶಶಿ ತರೂರ್
Published On :

ನವದೆಹಲಿ: ಪತ್ನಿ ಸುನಂದಾ ಪುಷ್ಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಶಶಿ ತರೂರ್ ಅವರಿಗೆ ದೆಹಲಿ ಪೋಲೀಸರು ಸೋಮವಾರ ನೋಟೀಸ್ ನೀಡಿದ್ದಾರೆ.

ದೆಹಲಿ ಪೊಲೀಸ್ ಆಯುಕ್ತ ಬಿಎಸ್. ಬಸ್ಸಿ ಅವರು ಮಾತನಾಡಿ, ಸುನಂದಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ತರೂರ್ ಅವರಿಗೆ ನೋಟೀಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಿಆರ್‌ಪಿಸಿ ಸೆಕ್ಷನ್ 160 ಅಡಿಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು. ನಾಳೆ ಅಥವಾ ಬುಧವಾರ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದ್ದು, ಇಂದು ಸಂಜೆಯೊಳಗೆ ಶಶಿ ತರೂರ್ ಅವರು ದೆಹಲಿಗೆ ಆಗಮಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ವಿಶೇಷ ತನಿಖಾ ತಂಡ ಆದಷ್ಟೂ ಬೇಗ ಈ ಪ್ರಕರಣವನ್ನೂ ಇತ್ಯರ್ಥಗೊಳಿಸಲಿದೆ. ಈಗಾಗಲೇ ಈ ತಂಡ ಪ್ರಮುಖ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದ್ದು, ಇನ್ನುಳಿದಂತ ಕೆಲವರನ್ನು ವಿಚಾರಣೆಗೆ ಒಳಪಡಿಸಿ, ಈ ಪ್ರಕರಣ ಬಗ್ಗೆ ಮಾಹಿತಿ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ದೆಹಲಿ ಸರೋಜಿನಿ ನಗರ ಪೊಲೀಸರು ಸುನಂದಾ ಪುಷ್ಕರ್ ಅಸಹಜ ಸಾವು ಎಂದು ಹೇಳಿ, ಪ್ರಕರಣವನ್ನು ಐಪಿಸಿ 302 ಅಡಿ ಕೊಲೆ ಎಂದು ದಾಖಲಿಸಿಕೊಂಡಿದ್ದರು. ಎಫ್‌ಐಆರ್‌ನಲ್ಲಿ ಯಾರ ಹೆಸರನ್ನು ಪ್ರಸ್ತಾಪಿಸದೇ, ಅಪರಿಚಿತ ವ್ಯಕ್ತಿಗಳಿಂದ ಕೊಲೆ ನಡೆದಿದೆ ಎಂದು ನಮೂದಿಸಿಕೊಂಡಿದ್ದರು.

ದೆಹಲಿ ಉಪ ಪೊಲೀಸ್ ಆಯುಕ್ತ ಪ್ರೇಮನಾಥ್ ಉಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ)ವನ್ನು ರಚಿಸಲಾಗಿತ್ತು.

ಕಳೆದ ಜನವರಿ 17ರಂದು ದೆಹಲಿಯ ಪಂಚತಾರಾ ಹೋಟೆಲೊಂದರಲ್ಲಿ 52 ವರ್ಷದ ಸುನಂದಾ ಶಂಕಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಡಿ.29ರಂದು ನೀಡಿರುವ ಅಂತಿಮ ವೈದ್ಯಕೀಯ ವರದಿ 'ಸುನಂದಾ ವಿಷ ಪ್ರಾಶನದಿಂದ ಸಾವನ್ನಪ್ಪಿದ್ದು ಅಸಹಜ ಸಾವು' ಎಂದು ಹೇಳಿತ್ತು.   

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.