ಹೊಗೇನಕಲ್ ಬಳಿ ಕಂದಕಕ್ಕೆ ಬಸ್ ಉರುಳಿ 5 ಸಾವು
ಹೊಗೇನಕಲ್ ಬಳಿ ತಮಿಳುನಾಡು ಸಾರಿಗೆ ಸಂಸ್ಥೆಗೆ ಸೇರಿದ ಸರ್ಕಾರಿ ಬಸ್ ಕಂದಕಕ್ಕೆ ಉರುಳಿದ್ದು, ಕನಿಷ್ಟ 5 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಹೊಗೇನಕಲ್ ಬಳಿ ಈ ಅಫಘಾತ ಸಂಭವಿಸಿದ್ದು,..

ಧರ್ಮಪುರಿ: ಹೊಗೇನಕಲ್ ಬಳಿ ತಮಿಳುನಾಡು ಸಾರಿಗೆ ಸಂಸ್ಥೆಗೆ ಸೇರಿದ ಸರ್ಕಾರಿ ಬಸ್ ಕಂದಕಕ್ಕೆ ಉರುಳಿದ್ದು, ಕನಿಷ್ಟ 5 ಮಂದಿ ಮೃತಪಟ್ಟಿದ್ದಾರೆ.
ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಹೊಗೇನಕಲ್ ಬಳಿ ಈ ಅಫಘಾತ ಸಂಭವಿಸಿದ್ದು, ಬೆಟ್ಟದಿಂದ ಬಸ್ 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ ಎಂದು ತಿಳಿದುಬಂದಿದೆ. ಬಸ್‌ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಈ ಪೈಕಿ 5 ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


