ದೆಹಲಿ ಚುನಾವಣೆ: ಕೇಜ್ರಿವಾಲ್‌ರಿಂದ ರೋಡ್ ಶೋ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಆಮ್ ಆದ್ಮಿಯ ಶಕ್ತಿ ಪ್ರದರ್ಶನ ಮಾಡಿದರು.
ಕೇಜ್ರಿವಾಲ್ ಅವರು ಇಂದು ರಾಷ್ಟ್ರ ರಾಜಧಾನಿಯ ಹೃದಯ ಭಾಗವಾದ ವಾಲ್ಮೀಕಿ ಮಂದಿರದಿಂದ ಜಂತರ್ ಮಂತರ್‌ವರೆಗೆ ಸುಮಾರು 7 ಕಿ.ಮೀ ವರೆಗೆ ರೋಡ್ ಶೋ ನಡೆಸಿದರು. ಕಳೆದ ಅಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ವಾಲ್ಮೀಕಿ ಮಂದಿರದ ಬಳಿ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದರು.
ದೆಹಲಿ ಮಾಜಿ ಮುಖ್ಯಮಂತ್ರಿ ತೆರೆದ ವಾಹನದಲ್ಲಿ ಪಕ್ಷದ ಸಹೋದ್ಯೋಗಿ ಮನಿಶ್ ಸಿಸೋಡಿಯಾ ಹಾಗೂ ಬೆಂಬಲಗರೊಂದಿಗೆ ಶಕ್ತಿ ಪ್ರದರ್ಶನ ಮಾಡಿದರು. ಕೇಜ್ರಿವಾಲ್ ಅವರು ರೋಡ್ ಶೋ ಬಳಿಕ ನಾಮಪತ್ರ ಸಲ್ಲಿಸಬೇಕಾಗಿತ್ತು. ಆದರೆ ರೋಡ್ ಶೋ ವಿಳಂಬವಾಗಿದ್ದರಿಂದ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ.
ಈ ಮಧ್ಯೆ ದೆಹಲಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ಬರುವಂತೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರಿಗೆ ಅರವಿಂದ್ ಕೇಜ್ರಿವಾಲ್ ನೀಡಿರುವ ಆಹ್ವಾನವನ್ನು ಬಿಜೆಪಿ ತಳ್ಳಿಹಾಕಿದ್ದು, ಎಲ್ಲಾ ಚರ್ಚೆಗಳನ್ನು ದೆಹಲಿ ವಿಧಾನಸಭೆಯಲ್ಲೇ ಮಾಡಲಾಗುವುದು ಎಂದು ಹೇಳಿದೆ. ಅಲ್ಲದೆ ಇದೊಂದು ಪ್ರಚಾರದ ಗಿಮಿಕ್ಕು ಅಷ್ಟೆ ಎಂದಿದೆ.
'ಎಲ್ಲಾ ಪ್ರಚಾರಕ್ಕಾಗಿ ಎಎಪಿ ಈ ರೀತಿ ಮಾಡುತ್ತಿದ್ದೆ. ತನ್ನ ಪ್ರಚಾರಕ್ಕಾಗಿ ಕಿರಣ್ ಬೇಡಿ ಅವರನ್ನು ಬಳಸಿಕೊಳ್ಳಲು ಆಪ್ ಯತ್ನಿಸುತ್ತಿದೆ. ಯಾವುದೇ ಚರ್ಚೆಗಳಿದ್ದರೂ ಅದನ್ನು ವಿಧಾಸಭೆಯಲ್ಲಿ ಚರ್ಚಿಸಲಾಗುವುದು' ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


