ಅಮೆರಿಕ ಎಚ್ಚರಿಕೆ ವರದಿಯಲ್ಲಿ ಹುರುಳಿಲ್ಲ
ಒಬಾಮ ಆಗಮನದ ವೇಳೆ ಭಾರತದಲ್ಲಿ ಯಾವುದೇ ವಿಧ್ವಂಸಕ ಕೃತ್ಯಗಳನ್ನು ನಡೆಸದಂತೆ ಪಾಕ್‌ಗೆ...

ವಾಷಿಂಗ್ಟನ್: ಒಬಾಮ ಆಗಮನದ ವೇಳೆ ಭಾರತದಲ್ಲಿ ಯಾವುದೇ ವಿಧ್ವಂಸಕ ಕೃತ್ಯಗಳನ್ನು ನಡೆಸದಂತೆ ಪಾಕ್‌ಗೆ ಅಮೆರಿಕ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಕುರಿತ ಭಾರತೀಯ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಯಲ್ಲಿ ಯಾವುದೇ ರೀತಿಯ ಹುರುಳಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಜಲಿಲ್ ಅಬ್ಬಾಸ್ ಜಿಲಾನಿ ಮಂಗಳವಾರ ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ಇಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಜಲಿಲ್ ಅಬ್ಬಾಸ್ ಅವರು, ಪಾಕಿಸ್ತಾನಕ್ಕೆ ಅಮೆರಿಕ ನೀಡಿರುವ ಎಚ್ಚರಿಕೆ ಸಂದೇಶದ ಕುರಿತ ಭಾರತೀಯ ಮಾಧ್ಯಮಗಳ ವರದಿಯಲ್ಲಿ ಹುರುಳಿಲ್ಲ. ಕಳೆದ ವಾರವಷ್ಟೇ ಇಸ್ಲಾಮಾಬಾದ್‌ಗೆ ಭೇಟಿ ನೀಡಿದ್ದ ಅಮೆರಿಕದ ವಿದೇಶಾಂಗ ಸಚಿವ ಜಾನ್ ಕೆರ್ರಿ ಅವರೇ ಉಗ್ರರ ನಿಗ್ರಹ ಕುರಿತು ಪಾಕಿಸ್ತಾನ ತೆಗೆದುಕೊಂಡಿರುವ ಕ್ರಮಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದು, ಈ ರೀತಿಯಾದ ಯಾವುದೇ ಎಚ್ಚರಿಕೆ ಸಂದೇಶಗಳು ಪಾಕಿಸ್ತಾನಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.
65ನೇ ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಲವು ಭದ್ರತೆ ಹಾಗೂ ಎಚ್ಚರಿಕೆ ಕ್ರಮಗಳನ್ನು ವಹಿಸಿರುವ ಅಮೆರಿಕಾ, ಒಬಾಮಾ ಆಗಮನದ ವೇಳೆ ಉಗ್ರರ ಕರಿನೆರಳು ಭಾರತದ ಮೇಲೆ ಬೀಳದಂತೆ ಹಾಗೂ ವಿಧ್ವಂಸಕ ಕೃತ್ಯಗಳನ್ನು ಎಸಗದಂತೆ ಎಚ್ಚರಿಕೆಯನ್ನು ನೀಡಿದ್ದರು. ಅಲ್ಲದೆ, ಒಂದು ವೇಳೆ ಅಂತಹ ಕೃತ್ಯಗಳು ನಡೆದರೆ ಪಾಕಿಸ್ತಾನವನ್ನೇ ನೇರವಾಗಿ ಹೊಣೆ ಮಾಡಲಾಗುವುದು ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶವೊಂದನ್ನು ರವಾನಿಸಿತ್ತು. ಈ ಕುರಿತ ಸುದ್ದಿ ಭಾರತೀಯ ಮಾಧ್ಯಮಗಳಲ್ಲಿ ವರದಿ ಬಿತ್ತರಗೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


