ದೆಹಲಿಗೂ ಕಾಲಿಟ್ಟ ಮಾರಕ ಎಬೋಲಾ ರೋಗ?

ನವದೆಹಲಿ: ಜಗತ್ತನ್ನೆ ಕಂಗೆಡಿಸಿರುವ ಮಾರಕ ರೋಗ ಎಬೋಲಾ ಇದೀಗ ಭಾರತಕ್ಕೂ ಕಾಲಿಟ್ಟಿದೆಯೇ ಎಂಬ ಆತಂಕ ವ್ಯಕ್ತವಾಗಿದೆ.
ಜೋಧ್‌ಪುರ ಮೂಲದ ವ್ಯಕ್ತಿಯೋರ್ವ ತೀವ್ರ ಜ್ವರದಿಂದ ಬಳಲುತ್ತಿದ್ದು, ಆತ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಆತನಲ್ಲಿ ಎಬೋಲಾ ಲಕ್ಷಣಗಳು ಗೋಚರಿಸಿವೆ ಎಂಬುದೇ ಇದೀಗ ಆತಂಕಕ್ಕೆ ಕಾರಣವಾಗಿದೆ.
ಆದರೆ ಇದನ್ನು ತಿರಸ್ಕರಿಸಿರುವ ಏಮ್ಸ್ ಆಸ್ಪತ್ರೆಯ ವೈದ್ಯ ಫ್ರೋ. ಸಂಜೀವ್ ಸಿನ್ಹಾ ಅವರು, ಆ ವ್ಯಕ್ತಿಯಲ್ಲಿ ಎಬೋಲಾ ಸೋಂಕು ಇದೆಯೆಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆತನ ರಕ್ತದ ಕೆಲವೊಂದು ಮಾದರಿಗಳನ್ನು ಲ್ಯಾಬ್‌ಗೆ ಕಳಿಸಲಾಗಿದೆ. ವರದಿ ಬಂದ ಬಳಿಕವಷ್ಟೇ ಎಬೋಲಾ ವೈರಸ್ ಬಗ್ಗೆ ದೃಡ ಪಡಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


