ದೇಶ

ದೆಹಲಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಮುಂಜಾನೆ ಬಹುಮಹಡಿ ಕಟ್ಟಡವೊಂದು ಕುಸಿದಿದ್ದು ಹಲವರು...

ದೆಹಲಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ
ದೆಹಲಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ ಹಲವರು ಸಿಲುಕಿರುವ ಶಂಕೆ
Published On :

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಮುಂಜಾನೆ ಬಹುಮಹಡಿ ಕಟ್ಟಡವೊಂದು ಕುಸಿದಿದ್ದು ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಗೌತಮ್‌ಪುರಿ ಪ್ರದೇಶದಲ್ಲಿದ್ದ ನಾಲ್ಕು ಹಂತದ ಮಹಡಿಯೊಂದು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಮಹಡಿ ಇದ್ದಕ್ಕಿದ್ದಂತೆ ಕುಸಿದಿದ್ದು, ಕಟ್ಟಡದಲ್ಲಿದ್ದ ಹಲವು ನಿವಾಸಿಗಳು ಅಪಾಯಕ್ಕೆ ಸಿಲುಕಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ 10 ಅಗ್ನಿಶಾಮಕ ದಳದ ವಾಹನಗಳು ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ಪ್ರಾರಂಭಿಸಿದ್ದು, ಈಗಾಗಲೇ ಅವಶೇಷಗಳಡಿ ಸಿಲುಕಿದ್ದ ಐವರನ್ನು ರಕ್ಷಿಸಿದ್ದಾರೆ. ಮತ್ತಷ್ಟು ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಇಂದು ಬೆಳಿಗಿನ ಜಾವ 3.12ರ ಸುಮಾರಿಗೆ ಅಗ್ನಿ ಶಾಮಕ ದಳದ ಕಚೇರಿಗೆ ಕಟ್ಟಡ ಕುಸಿದಿರುವುದಾಗಿ ಕರೆ ಬಂದಿತು. ತಕ್ಷಣ ರಕ್ಷಣಾ ದಳದೊಂದಿಗೆ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಲಾಯಿತು. ಕಟ್ಟದ ಅವಶೇಷಗಳಡಿ ಇದ್ದ ಐವರನ್ನು ರಕ್ಷಣೆ ಮಾಡಲಾಗಿದ್ದು. ಯಾವುದೇ ಸಾವು ಸಂಭವಿಸಿರುವ ಕುರಿತು ಮಾಹಿತಿ ಇಲ್ಲ ಎಂದು ದೆಹಲಿ ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.