ಸುನಂದಾ ಸಾವು ಪ್ರಕರಣ: ಪತ್ರಕರ್ತರ ವಿಚಾರಣೆ ಸಾಧ್ಯತೆ
ಪತ್ನಿ ಸುನಂದಾ ಪುಷ್ಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಶಶಿ ತರೂರ್ ಅವರನ್ನು ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೆ, ದೆಹಲಿ ಪೊಲೀಸರು...

ನವದೆಹಲಿ: ಪತ್ನಿ ಸುನಂದಾ ಪುಷ್ಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಶಶಿ ತರೂರ್ ಅವರನ್ನು ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೆ, ದೆಹಲಿ ಪೊಲೀಸರು ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ದೆಹಲಿ ಪೊಲೀಸ್ ಆಯುಕ್ತ ಬಿಎಸ್ ಬಸ್ಸಿ ಅವರು ಮಾತನಾಡಿ, ಸುನಂದಾ ಪುಷ್ಕರ್ ಸಾವು ಪ್ರಕರಣದ ಸಂಬಂಧ ಕೆಲವು ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಸಾವಿನ ಮುನ್ನಾ ದಿನ ಪುಷ್ಕರ್ ಪತ್ರಕರ್ತರೊಂದಿಗೆ ನಡೆಸಿದ್ದರು. ಆ ಪತ್ರಕರ್ತರನ್ನು ಸದ್ಯದಲ್ಲೇ ವಿಚಾರಣೆಗೊಳಪಡಿಸಲಾಗುವುದು. ಅವರನ್ನು ವಿಚಾರಣೆಗೆ ಒಳಪಡಿಸಿದ ನಂತರ ಮತ್ತಷ್ಟು ಮಾಹಿತಿ ಸಿಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತರೂರ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆ ವೇಳೆ ತರೂರ್ ನೀಡಿದ ಹೇಳಿಕೆಗಳನ್ನು ಪರಿಶೀಲಿಸುತ್ತಿದ್ದು, ಅಗತ್ಯಬಿದ್ದರೆ ಮತ್ತೆ ಅವರನ್ನು ವಿಚಾರಣೆಗೊಳಪಡಿಸಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದರು.
ಕಳೆದ ವರ್ಷ ದೆಹಲಿಯ ಪಂಚತಾರಾ ಹೋಟೆಲೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದ ಸುನಂದಾ ಪುಷ್ಕರ್ ಸಾವಿಗೆ ಸಂಬಂಧಿಸಿ ದೆಹಲಿ ಪೊಲೀಸರು ಇತ್ತೀಚೆಗಷ್ಟೆ ಹತ್ಯೆ ಪ್ರಕರಣ ದಾಖಲಿಸಿದ್ದರು. ಈ ಸಂಬಧ ತರೂರ್ ಅವರನ್ನು ಮರು ವಿಚಾರಣೆ ನಡೆಸುವ ಸುಳಿವು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


