ನಾಗರಿಕ ಪರಮಾಣು ಒಪ್ಪಂದಕ್ಕೆ ಭಾರತ-ಅಮೆರಿಕ ಸಹಿ
ಮೂರು ದಿನಗಳ ಭಾರತ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದ್ವಿಪಕ್ಷೀಯ ಮಾತುಕತೆಗಳನ್ನೂ ನಡೆಸಿದ್ದು, ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.

ನವದೆಹಲಿ: ಮೂರು ದಿನಗಳ ಭಾರತ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದ್ವಿಪಕ್ಷೀಯ ಮಾತುಕತೆಗಳನ್ನೂ ನಡೆಸಿದ್ದು, ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಜಂಟಿ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ನಾಗರಿಕ ಪರಮಾಣು ಸೇರಿದಂತೆ ಭದ್ರತೆ ಮತ್ತು ರಕ್ಷಣಾ ಕ್ಷೇತ್ರಗಳ ಹಲವು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ ಎಂದರು.
ಬ್ಯುಸಿ ಷೆಡ್ಯೂಲ್‌ನಲ್ಲೂ ಭಾರತ ಪ್ರವಾಸ ಕೈಗೊಂಡಿರುವ ಬರಾಕ್ ಒಬಾಮಾರಿಗೆ ಧನ್ಯವಾದ ಸಲ್ಲಿಸಿದರು. ಬರಾಕ್ ಒಬಾಮಾ ಭಾರತಕ್ಕೆ ಭೇಟಿ ನೀಡಿರುವುದು ಭಾರತ ಮತ್ತು ಅಮೆರಿಕದ ಬಾಂಧವ್ಯ ವೃದ್ಧಿಗೆ ಪೂರಕವಾಗಲಿದೆ ಎಂದರು.
ಉಭಯ ದೇಶಗಳ ನಡುವೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಅದರಂತೆ 6 ವರ್ಷಗಳ ಹಳೆಯ ನಾಗರಿಕ ಪರಮಾಣು ಒಪ್ಪಂದ ಜಾರಿಯಾಗುತ್ತಿರುವುದಕ್ಕೆ ಮೋದಿ ಸಂತಸ ವ್ಯಕ್ತಪಡಿಸಿದರು. ರಕ್ಷಣಾ ಕ್ಷೇತ್ರದ ಒಪ್ಪಂಗಳ ನವೀಕರಣಕ್ಕೆ ಸಮ್ಮತಿ, ಅತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ವ್ಯವಹಾರದಲ್ಲಿ ಪ್ರಗತಿ ಕುರಿತಂತೆ ಹಲವು ಒಡಂಬಡಿಕೆಗಳಿಗೆ ಸಹಿ ಹಾಕಲಾಗಿದೆ ಎಂದರು.
ಇವುಗಳಲ್ಲಿ ಮುಖ್ಯವಾಗಿ ಭಯೋತ್ಪಾದನೆ ವಿರುದ್ಧ ಸಮರಕ್ಕೆ ಅಮೆರಿಕ ಸಾಥ್ ನೀಡಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಬಾಮ, ನಮಸ್ತೆ ಎಂದು ಮಾತು ಆರಂಭಿಸಿದರು. ‘ಮೇರಾ ಪ್ಯಾರ್ ಬರಾ ನಮಸ್ಕಾರ್’ ಎನ್ನುತ್ತಾ ಗಣರಾಜ್ಯೋತ್ಸವದ ಅತಿಥಿಯಾಗಿ ಆಹ್ವಾನಿಸಿದ್ದಕ್ಕೆ ಪ್ರಧಾನಮಂತ್ರಿ ನರೇಂದ್ರಮೋದಿಗೆ ಕೃತಜ್ಞತೆ ಸಲ್ಲಿಸಿದರು.
ಬರಾಕ್ ಒಬಾಮ, ಅಮೆರಿಕ ಅಧ್ಯಕ್ಷ
- ಭಾರತಕ್ಕೆ ಬಂದ ನನಗೆ ಅಭೂತಪೂರ್ವ ಸ್ವಾಗತ ಸಿಕ್ಕಿದೆ
- ವಾಣಿಜ್ಯ, ರಕ್ಷಣಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ
- ಉಭಯ ದೇಶಗಳ ಮಧ್ಯೆ ಒಪ್ಪಂದಗಳಿಗೆ ಸಹಿ
- ಉಭಯ ದೇಶಗಳ ಹೊಸ ರಕ್ಷಣಾ ಒಪ್ಪಂದಕ್ಕೆ ಸಹಿ
- ವಿಶ್ವಶಾಂತಿಗೆ ಉಭಯ ದೇಶಗಳು ಕೈ ಜೋಡಿಸಬೇಕಿದೆ
- ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸದಸ್ಯತ್ವಕ್ಕೆ ಬೆಂಬಲ
- ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಹೇಳಿಕೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


