ದೇಶ

ತಂದೆಯ ಸಲಹೆಯಂತೆ ಕೆಲಸ: ಶರ್ಮಿಷ್ಠಾ

ದೆಹಲಿಯ ಪ್ರತಿಷ್ಠಿತ ಗ್ರೇಟರ್ ಕೈಲಾಶ್ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆನಿಂದ ಕಣಕ್ಕಿಳಿದಿರುವ ರಾಷ್ಟ್ರಪತಿ...

ತಂದೆಯ ಸಲಹೆಯಂತೆ ಕೆಲಸ: ಶರ್ಮಿಷ್ಠಾ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ
Published On :

ನವದೆಹಲಿ: ದೆಹಲಿಯ ಪ್ರತಿಷ್ಠಿತ ಗ್ರೇಟರ್ ಕೈಲಾಶ್ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆನಿಂದ ಕಣಕ್ಕಿಳಿದಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ಚೊಚ್ಚಲ  ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನೀನು ರಾಜಕೀಯಕ್ಕೆ ಧುಮುಕಿದ್ದಿ. ಮುಂದಿನ ಹಾದಿ ಬಲು ಕಷ್ಟಕರವಾಗಿದೆ. ಕಠಿಣ ಪರಿಶ್ರಮ ಮತ್ತು ತಾಳ್ಮೆಯಿದ್ದರೆ ಮಾತ್ರ ಯಶಸ್ಸು ಸಿಗಲಿದೆ. ಎಂದು ನನ್ನ ತಂದೆ ಹೇಳಿದ್ದರು.

ನಾನು ಅವರ ಮೌಲ್ಯಯುತ ಸಲಹೆಯಂತೆ ಕಾರ್ಯನಿರ್ವಹಿಸುತ್ತಿದ್ದೇನೆ ಎಂದಿದ್ದಾರೆ ಶರ್ಮಿಷ್ಠಾ. ಕಳೆದ ಚುನಾವಣೆಯಲ್ಲಿ ಈ  ಕ್ಷೇತ್ರವನ್ನು ಆಮ್ ಆದ್ಮಿ ಪಕ್ಷ ಬಾಚಿಕೊಂಡಿತ್ತು.  ಬಿಜೆಪಿ ಅಭ್ಯರ್ಥಿ ಎರಡನೇ ಸ್ಥಾನ ಪಡೆದಿದ್ದಾರೆ, ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.