ಕೇಜ್ರೀವಾಲ್‌ಗೆ 'ಬೇಡಿ ನೋಟಿಸ್'
ಅನುಮತಿ ಪಡೆಯದೇ ತಮ್ಮ ಭಾವಚಿತ್ರವನ್ನು ಬಳಕೆ ಮಾಡುತ್ತಿದ್ದು, ಪೋಸ್ಟರ್‌ಗಳಲ್ಲಿ ತಮ್ಮ ಚಾರಿತ್ರ್ಯವಧೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ...

ನವದೆಹಲಿ: ಚುನಾವಣಾ ಪ್ರಚಾರಕ್ಕಾಗಿ ಆಮ್ ಆದ್ಮಿ ಪಕ್ಷ ಬಳಕೆ ಮಾಡುತ್ತಿರುವ ವಿವಾದಿತ ಪೋಸ್ಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರು ಅರವಿಂದ್ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿದ್ದಾರೆ.
ಆಮ್ ಆದ್ಮಿ ಪಕ್ಷ ಚುನಾವಣಾ ಪ್ರಚಾರಕ್ಕಾಗಿ ಬಳಕೆ ಮಾಡುತ್ತಿರುವ ಪೋಸ್ಟರ್‌ಗಳಲ್ಲಿ ಅನುಮತಿ ಪಡೆಯದೇ ತಮ್ಮ ಭಾವಚಿತ್ರವನ್ನು ಬಳಕೆ ಮಾಡುತ್ತಿದ್ದಾರೆ. ಅಲ್ಲದೆ ಪೋಸ್ಟರ್‌ಗಳಲ್ಲಿ ತಮ್ಮ ಚಾರಿತ್ರ್ಯವಧೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಕಿರಣ್ ಬೇಡಿ ಅವರು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಕಾನೂನು ನೋಟಿಸ್ ನೀಡಿದ್ದಾರೆ.
'ಹೌದು ಕಿರಣ್ ಬೇಡಿ ಅವರು ಕೇಜ್ರಿವಾಲ್ ಅವರಿದೆ ನೋಟಿಸ್ ನೀಡಿರುವುದು ನಿಜ. ಅವರ ಅನುಮತಿ ಇಲ್ಲದೇ ಅವರ ಭಾವಚಿತ್ರವನ್ನು ಬಳಕೆ ಮಾಡಿರುವುದು ಆಕ್ಷೇಪಾರ್ಹವಾಗಿದೆ' ಎಂದು ಬಿಜೆಪಿ ಪಕ್ಷದ ಮಾಧ್ಯಮ ವಕ್ತಾರರಾದ ಪ್ರವೀಣ್ ಶಂಕರ್ ಕಪೂರ್ ಅವರು ಹೇಳಿದ್ದಾರೆ.
ದಿನಕಳೆದಂತೆ ದೆಹಲಿ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಹರಸಾಹಸ ಪಡುತ್ತಿವೆ. ಇನ್ನು ಈ ಭಾರಿಯ ದೆಹಲಿ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳಾಗಿ ಗುರುತಿಸಿಕೊಂಡಿರುವ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಪಕ್ಷಗಳ ನಡುವೆ ಮುಖಾಮುಖಿ ಸಮರ ನಡೆಯುತ್ತಿದ್ದು, ಪರಸ್ಪರ ಕೆಸರೆರಚಾಟದ ಮೂಲಕ ದೆಹಲಿ ಜನತೆಯ ಗಮನ ಸೆಳೆಯಲು ಉಭಯ ಪಕ್ಷಗಳು ಪ್ರಯತ್ನಿಸುತ್ತಿವೆ.
ಇನ್ನು ಒಂದು ಹೆಜ್ಜೆ ಮುಂದೆ ಹೋಗಿರುವ ಆಮ್ ಆದ್ಮಿ ಪಕ್ಷ ತಮ್ಮ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಮತ್ತು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರ ಭಾವಚಿತ್ರಗಳಿರುವ ಪೋಸ್ಟರ್‌ಗಳನ್ನು ಬಳಕೆ ಮಾಡುತ್ತಿದೆ. 'ನಿಷ್ಟಾವಂತ ಅರವಿಂದ್ ಕೇಜ್ರಿವಾಲ್ ಬೇಕೋ ಅಥವಾ ಅವಕಾಶವಾದಿ ಕಿರಣ್ ಬೇಡಿ ಅವರು ಬೇಕೋ ಎಂದು ನೀವೇ ನಿರ್ಧರಿಸಿ' ಎಂಬ ವಿವಾದಾತ್ಮಕ ಪೋಸ್ಚರ್‌ಗಳನ್ನು ಆಟೋಗಳ ಹಿಂಬದಿಯಲ್ಲಿ ಅಂಟಿಸಿ ಎಎಪಿ ಪ್ರಚಾರ ಮಾಡುತ್ತಿದೆ. ಇದು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದು, ಇದೀಗ ಆಮ್ ಆದ್ಮಿ ಪಕ್ಷದ ವಿರುದ್ಧ ಕಾನೂನು ಕ್ರಮ ಜರುಗಿಸಲು ಬಿಜೆಪಿ ಮುಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


