ರಾಷ್ಟ್ರಗೀತೆಗೆ ಅಪಮಾನ: ಉಪರಾಷ್ಟ್ರಪತಿ ಕಾರ್ಯಾಲಯದ ಸ್ಪಷ್ಟನೆ
ಗಣರಾಜ್ಯೋತ್ಸವ ವೇಳೆ ರಾಷ್ಟ್ರಗೀತೆಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪರಾಷ್ಟ್ರಪತಿ ಸಚಿವಾಲಯವು ಮಂಗಳವಾರ ಸ್ಪಷ್ಟನೆ ನೀಡಿದೆ.

ನವದೆಹಲಿ: ಗಣರಾಜ್ಯೋತ್ಸವ ವೇಳೆ ರಾಷ್ಟ್ರಗೀತೆಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪರಾಷ್ಟ್ರಪತಿ ಸಚಿವಾಲಯವು ಮಂಗಳವಾರ ಸ್ಪಷ್ಟನೆ ನೀಡಿದೆ.
'ಶಿಷ್ಟಾಚಾರದ ಪ್ರಕಾರ ಧ್ವಜಾರೋಹಣದ ವೇಳೆ ಉಪರಾಷ್ಟ್ರಪತಿಗಳು ಪಾಲಿಸಬೇಕಾದ ಎಲ್ಲ ಕರ್ತವ್ಯಗಳನ್ನು ಪಾಲಿಸಿದ್ದಾರೆ. ರಾಷ್ಟ್ರಪತಿಗಳ ಉಪಸ್ಥಿತಿ ವೇಳೆ ನಡೆಯುವ ಧ್ವಜಾರೋಹಣ ಅಥವಾ ರಾಷ್ಟ್ರಗೀತೆಯನ್ನು ಹಾಡುವ ವೇಳೆ ಉಪರಾಷ್ಟ್ರಪತಿಗಳು ಎದ್ದುನಿಂತು ಗೌರವ ಸೂಚಿಸುವುದು ಶಿಷ್ಟಾಚಾರ ಅದನ್ನು ಹಮೀದ್ ಅನ್ಸಾರಿ ಅವರು ಪಾಲಿಸಿದ್ದಾರೆ' ಎಂದು ಉಪರಾಷ್ಟ್ರಪತಿಗಳ ಕಾರ್ಯಾಲಯ ಸ್ಪಷ್ಟನೆ ನೀಡಿದೆ.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟರ್‌ನಲ್ಲಿ ಸ್ಪಷ್ಟನೆ ನೀಡಿರುವ ಉಪರಾಷ್ಟ್ರಪತಿಗಳ ವಿಶೇಷ ಅಧಿಕಾರಿ ಮತ್ತು ರಾಜ್ಯಸಭಾ ಟಿವಿ ಸಂಪಾದಕರಾದ ಗುರ್‌ದೀಪ್ ಸಿಂಗ್ ಸಪ್ಪಲ್ ಅವರು, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಯಾವುದೇ ರೀತಿಯಲ್ಲಿಯೂ ಶಿಷ್ಟಾಚಾರವನ್ನು ಉಲ್ಲಂಘಿಸಿಲ್ಲ.
ರಾಷ್ಟ್ರಪತಿಗಳ ಉಪಸ್ಥಿತಿಯಲ್ಲಿ ವಿಶೇಷ ಆಹ್ವಾನಿತರು ಮತ್ತು ಸಮವಸ್ತ್ರದಲ್ಲಿರುವ ಅಧಿಕಾರಿಗಳು ಧ್ವಜಾರೋಹಣದ ವೇಳೆ ಸೆಲ್ಯೂಟ್ ಮಾಡಬೇಕು ಮತ್ತು ಸಾಮಾನ್ಯ ಉಡುಗೆ ಅಥವಾ ನಾಗರೀಕ ಉಡುಗೆಯಲ್ಲಿರುವವರು ಎದ್ದು ನಿಂತು ಗೌರವ ಸಲ್ಲಿಸಬೇಕು ಎಂದು ಹೇಳಿದ್ದಾರೆ.
ನಿನ್ನೆ ನವದೆಹಲಿಯ ರಾಜ್‌ಪಥ್‌ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಧ್ವಜಾರೋಹಣದ ವೇಳೆ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಸೆಲ್ಯೂಟ್ ಮಾಡಿರಲಿಲ್ಲ. ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ಟ್ವಿಟರ್‌ಗಳಲ್ಲಿ ವ್ಯಾಪಕ ಪ್ರಚಾರ ಪಡೆದುಕೊಂಡಿತ್ತು.
ಅಲ್ಲದೇ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರ ವಿರುದ್ಧ ವ್ಯಾಪಕ ಟೀಕೆಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಇಂದು ಉಪರಾಷ್ಟ್ರಪತಿ ಸಚಿವಾಲಯವು ಸ್ಪಷ್ಟನೆ ನೀಡಿದ್ದು, ಹಮೀದ್ ಅನ್ಸಾರಿ ಅವರು ಶಿಷ್ಟಾಚಾರವನ್ನು ಉಲ್ಲಂಘಿಸಿಲ್ಲ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


