ದೇಶ

ಬೇಕಾಬಿಟ್ಟಿ ನಾಲಿಗೆ ಹರಿಬಿಡಬೇಡಿ

ಆಮ್ ಆದ್ಮಿ ಪಕ್ಷದ ಮುಖಂಡ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ಚುನಾವಣಾ ಆಯೋಗವು ಮಂಗಳವಾರ...

ಬೇಕಾಬಿಟ್ಟಿ ನಾಲಿಗೆ ಹರಿಬಿಡಬೇಡಿ
ಅರವಿಂದ ಕೇಜ್ರಿವಾಲ್
Published On :

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ಚುನಾವಣಾ ಆಯೋಗವು ಮಂಗಳವಾರ ಖಡಕ್ ಎಚ್ಚರಿಕೆ ನೀಡಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಕಚೇರಿಗೆ ಹೋಗಿ ಹಣ ಪಡೆದು, ಆಪ್ ಗೆ ಮತ ಹಾಕಿ ಎಂದು ನೀಡಿದ್ದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗವು,ಇಂಥ ಹೇಳಿಕೆಗಳು ಮತ್ತೆ ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿದೆ. ಅಲ್ಲದೆ, ಹೀಗೇ ಮುಂದುವರಿದರೆ ಕಠಿಣ ಕ್ರಮ ಜರುಗಿಸುವುದಾಗಿಯೂ ಹೇಳಿದೆ. `ನಾವು ಪದೇ ಪದೇ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡುತ್ತಿದ್ದೀರಿ. ಚುನಾವಣಾ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ಕಾರಣಕ್ಕಾಗಿ ಹಲವು ಬಾರಿ ನೋಟಿಸ್ ನೀಡಿದ್ದರೂ ಸಹ ನಿಮ್ಮ ಹೇಳಿಕೆ ಮುಂದುವರಿಸಿದ್ದೀರಿ. ಇಂಥ ಹೇಳಿಕೆಯನ್ನು ಕೂಡಲೇ ನಿಲ್ಲಿಸಬೇಕು' ಎಂದು ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ. ಇದಲ್ಲದೆ ಮತ್ತೊಮ್ಮೆ ನೀತಿ ಸಂಹಿತೆ ಉಲ್ಲಂಘನೆಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗ  ಹೇಳಿದೆ.

ಮತ್ತೆ ಆಯೋಗಕ್ಕೆ ದೂರು

ಚುನಾವಣಾ  ಪ್ರಚಾರದ ವೇಳೆ  ಎಎಪಿ ವಿರುದ್ದ ಚುನಾವಣಾ ಆಯೋಗಕ್ಕೆ ಬಿಜೆಪಿ ಮತ್ತೊಮ್ಮೆ ದೂರು ನೀಡಿದೆ.ಎಎಪಿಯು ಕಿರಣ್ ಬೇಡಿ ಅವರ  ಫೋಟೋವನ್ನು ದುರ್ಬಳಕೆ ಮಾ ಡಿಕೊಳ್ಳು ತ್ತಿದೆ ಎಂದು ಬಿಜೆಪಿ ಮಂಗಳವಾರ ನೀಡಿದ ದೂರಿನಲ್ಲಿ ತಿಳಿಸಿದೆ. ಅರವಿಂದ್ ಕೇಜ್ರಿವಾಲ್ ಹಾಗೂ ಕಿರಣ್ ಬೇಡಿ ಅವರ ಫೋಟೋವನ್ನು ಅಕ್ಕಪಕ್ಕದಲ್ಲಿಟ್ಟು ಕೇಜ್ರಿವಾಲ್ ಪ್ರಾಮಾಣಿಕರು, ಕಿರಣ್ ಅವಕಾಶವಾದಿ ಎಂಬ ಶೀರ್ಷಿಕೆಯಡಿ ಬಳಕೆ ಮಾಡಲಾಗಿದೆ. ಈ ಫೋಟೋಗಳನ್ನು ಆಟೋಗಳ ಹಿಂಬದಿ ಅಂಟಿಸಿ ಪ್ರಚಾರ ಮಾಡಲಾಗುತ್ತಿದೆ. ಇದು ಕಿರಣ್ ಬೇಡಿ ಅವರ ಘನತೆಗೆ ಚ್ಯುತಿ ತರುವ ಕಾರ್ಯವಾಗಿದೆ. ಇನ್ನು  24 ಗಂಟೆಗಳಲ್ಲಿ ಆ ಫೋಟೋಗಳನ್ನು ತೆಗೆದುಹಾಕಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.