ದೇಶ

ಬಿಜೆಪಿ ಬಗ್ಗೆ ಮೃದುವಾಗಿದಿದ್ದರೆ, ಆಪ್ ನನಗೆ ಸಿಎಂ ಹುದ್ದೆ ಆಫರ್ ಮಾಡಿದ್ದೇಕೆ?: ಕಿರಣ್ ಬೇಡಿ

ಹಿಂದೆ ನಾನು ಬಿಜೆಪಿ ಬಗ್ಗೆ ಮೃದು ಧೋರಣೆ ಹೊಂದಿದ್ದೆಯಾದರೆ, ಆಮ್ ಆದ್ಮಿ ಪಕ್ಷ ನನಗೆ ಮುಖ್ಯಮಂತ್ರಿ ಹುದ್ದೆಯ ಆಫರ್ ಮಾಡಿದ್ದೇಕೆ ಎಂದು ಬಿಜೆಪಿ ಮುಖ್ಯಮಂತ್ರಿ ....

ಬಿಜೆಪಿ ಬಗ್ಗೆ ಮೃದುವಾಗಿದಿದ್ದರೆ, ಆಪ್ ನನಗೆ ಸಿಎಂ ಹುದ್ದೆ ಆಫರ್ ಮಾಡಿದ್ದೇಕೆ?: ಕಿರಣ್ ಬೇಡಿ
ಕಿರಣ್ ಬೇಡಿ
Published On :

ನವದೆಹಲಿ: ಹಿಂದೆ ನಾನು ಬಿಜೆಪಿ ಬಗ್ಗೆ ಮೃದು ಧೋರಣೆ ಹೊಂದಿದ್ದೆಯಾದರೆ, ಆಮ್ ಆದ್ಮಿ ಪಕ್ಷ ನನಗೆ ಮುಖ್ಯಮಂತ್ರಿ ಹುದ್ದೆಯ ಆಫರ್ ಮಾಡಿದ್ದೇಕೆ ಎಂದು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರು ಬುಧವಾರ ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರ ವಿರೋಧ ಹೋರಾಟದ ವೇಳೆ ಕಿರಣ್ ಬೇಡಿ ಅವರು ಬಿಜೆಪಿ ಬಗ್ಗೆ ಮೃದು ಧೋರಣೆ ಹೊಂದಿದ್ದರು. ಅಲ್ಲದೆ ಅರವಿಂದ್ ಕೇಜ್ರಿವಾಲ್ ಅವರಿಗೂ ಬಿಜೆಪಿ ಬಗ್ಗೆ ಮೃದು ಧೋರಣೆ ತಾಳುವಂತೆ ಕೇಳಿಕೊಂಡಿದ್ದರು ಎಂದು ಆಪ್ ನಾಯಕ ಕುಮಾರ್ ವಿಶ್ವಾಸ ಅವರು ಆರೋಪಿಸಿದ್ದರು.

ಈ ಕುರಿತು ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿರುವ ಕಿರಣ್ ಬೇಡಿ, ನನ್ನ ಮೇಲೆ ಅವರಿಗೆ ನಂಬಿಕೆ ಇಲ್ಲದಿದ್ದರೆ, ಅವರು ಏಕೆ ನನಗೆ ಮುಖ್ಯಮಂತ್ರಿ ಹುದ್ದೆಯ ಆಫರ್ ನೀಡಿದ್ದರು ಎಂದು ಪ್ರಶ್ನಿಸಿದ್ದಾರೆ.

ಕುಮಾರ್ ವಿಶ್ವಾಸ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಈ ಮುಂಚೆ ಕಿರಣ್ ಬೇಡಿ ನಿರಾಕರಿಸಿದ್ದರು. ಆರೋಪಗಳಿಗೆ ಪ್ರತಿಕ್ರಿಯೆ ನೀಡಲು ನನಗೆ ಸಮಯ ಇಲ್ಲ. ನಾನು ಜನರಿಗಾಗಿ ಕೆಲಸ ಮಾಡಬೇಕಿದೆ ಎಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.