ನೆಲಕ್ಕಪ್ಪಳಿಸಿದ ಮಿಗ್-21 ವಿಮಾನ: ಪೈಲೆಟ್ ಪಾರು

ಜಾಮ್‌ನಗರ/ಗುಜರಾತ್: ಭಾರತೀಯ ವಾಯುಪಡೆಗೆ ಸೇರಿದ ಮಿಗ್-21 ಯುದ್ಧ ವಿಮಾನ ಗುಜರಾತ್‌ನ ಜಾಮ್‌ನಗರದ ಬಳಿ ನೆಲಕ್ಕಪ್ಪಳಿಸಿದ್ದು, ಪೈಲೆಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಾಯುಪಡೆಗೆ ಸೇರಿದ ಮಿಗ್-21 ವಿಮಾನ ಜಾಮ್‌ನಗರದ ಬಳಿ ಅಪಘಾತಕ್ಕೀಡಾಗಿದ್ದು, ವಿಮಾನ ಪತನಕ್ಕೂ ಮುನ್ನ ಪೈಲಟ್ ವಿಮಾನದಿಂದ ಹೊರಕ್ಕೆ ಚಿಗಿದಿದ್ದರಿಂದ ಪ್ರಾಯಾಪಾಯದಿಂದ ಪಾರಾಗಿದ್ದಾರೆ ಎಂದು ವಾಯುಪಡೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವಿಮಾನದಲ್ಲಿದ್ದ ವಸ್ತುಗಳು ಸ್ಫೋಟಗೊಂಡಿದ್ದರಿಂದ ವಿಮಾನ ಪತನಗೊಂಡಿರುವ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ಕಳೆದ ಒಂದು ವಾರದಲ್ಲಿ ಎರಡು ಮಿಗ್ ವಿಮಾನ ಅಪಘಾತಕ್ಕೀಡಾಗಿದೆ. ರಾಜಸ್ಥಾನದ ಬ್ರಮರ್ ಎಂಬದಲ್ಲಿ ಮಿಗ್-27 ವಿಮಾನ ಬೈಕ್ ಸವಾರನಿಗೆ ಗುದ್ದಿತ್ತು. ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿದ್ದ. ಮಿಗ್ ವಿಮಾನ ಪತನಕ್ಕೂ ಮುನ್ನ ಪೈಲಟ್ ಸುರಕ್ಷಿತ ಬಟನ್ ಹೊತ್ತುವ ಮೂಲಕ ವಿಮಾನದಿಂದ ಹೊರಕ್ಕೆ ಚಿಮ್ಮಿದ್ದು ಸಣ್ಣಪುಟ್ಟ ಗಾಯಗಳಾಗಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


