ಪ್ರಯಾಣಿಕರನ್ನು ಏರ್ ಇಂಡಿಯಾ ವಿಮಾನದಿಂದ ಕೆಳಗಿಳಿಸಿದ ಪ್ರಕರಣ: ವರದಿ ಕೇಳಿದ ಪ್ರಧಾನಿ ಕಾರ್ಯಾಲಯ
ಕೇಂದ್ರ ಸಚಿವ ಕಿರಣ್ ರಿಜಿಜು ಅವರಿಗಾಗಿ ಮೂವರು ಪ್ರಯಾಣಿಕರನ್ನು ಏರ್ ಇಂಡಿಯಾ ಸಿಬ್ಬಂದಿ ಕೆಳಗಿಳಿಸಿದ ಪ್ರಕರಣ ಸಂಬಂಧ ಪ್ರಧಾನ ಮಂತ್ರಿ ಕಾರ್ಯಾಲಯ...

ನವದೆಹಲಿ: ಕೇಂದ್ರ ಸಚಿವ ಕಿರಣ್ ರಿಜಜು ಅವರಿಗಾಗಿ ಮೂವರು ಪ್ರಯಾಣಿಕರನ್ನು ಏರ್ ಇಂಡಿಯಾ ಸಿಬ್ಬಂದಿ ಕೆಳಗಿಳಿಸಿದ ಪ್ರಕರಣ ಸಂಬಂಧ ಪ್ರಧಾನ ಮಂತ್ರಿ ಕಾರ್ಯಾಲಯ ವಿವರಣೆ ನೀಡುವಂತೆ ನಾಗರಿಕ ವಿಮಾನ ಯಾನ ಸಚಿವಾಲಯಕ್ಕೆ ಸೂಚಿಸಿದೆ. ಜೊತೆಗೆ ವಿಐಪಿಗಳಿಂದಾಗಿ ವಿಮಾನ ಪ್ರಯಾಣ ವಿಳಂಬದ ಬಗ್ಗೆ ಕೂಡ ಪ್ರಧಾನಿ ಕಾರ್ಯಾಲಯ ವಿವರ ಕೇಳಿದೆ. ಇನ್ನು ಜೂನ್ 24 ರಂದು ಏರ್ ಇಂಡಿಯಾ ಪ್ರಯಾಣ ವಿಲಂಬವಾಗಿದ್ದನ್ನು ಭಾರತೀಯ ವಿಮಾನಯಾನ ಒಪ್ಪಿಕೊಂಡಿದೆ.
ಇನ್ನು ತಡವಾಗಿ ಬೆಳಕಿಗೆ ಬಂದ ಈ ಪ್ರಕರಣದ ಬಗ್ಗೆ ಜಮ್ಮು ಕಾಶ್ಮೀರ ಉಪಮುಖ್ಯಮಂತ್ರಿ ನಿರ್ಮನ್ ಸಿಂಗ್ ವಿವರಣೆ ನೀಡಿದ್ದಾರೆ. ಅಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರನ್ನು ಬಲವಂತವಾಗಿ ಕೆಳಗಿಳಿಸಿಲ್ಲ. ಪ್ರಯಾಣಿಕರೊಂದಿಗೆ ಸಮಾಲೋಚಿಸಿ, ಅವರಿಗೆ ಮನವಿ ಮಾಡಿ ನಂತರವಷ್ಟೆ ಅವರ ಒಪ್ಪಿಗೆ ಮೇರೆಗೆ ಅವರನ್ನು ಕೆಳಗಿಳಿಸಿ, ಸಚಿವರು ಹಾಗೂ ಅವರ ಭದ್ರತಾ ಸಿಬ್ಬಂದಿಗೆ ಆಸನದ ವ್ಯವಸ್ಥೆ ಮಾಡಲಾಯಿತು ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ನಡುವೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕಿರಣ್ ರಿಜಜು, ಯಾರನ್ನು ನೋಯಿಸುವ ಉದ್ದೇಶ ನನಗಿಲ್ಲ, ನನ್ನಿಂದ ಯಾರಿಗಾದರೂ ತೊಂದರೆಯಾಗಿದ್ದರೇ ಅವರಲ್ಲಿ ನಾನು ಕ್ಷಮಾಪಣೆ ಕೇಳುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


