ದೇಶ

ಸಚಿವ ಕಿರಣ್ ರಿಜಿಜುಗಾಗಿ 3 ಪ್ರಯಾಣಿಕರನ್ನು ಹೊರದಬ್ಬಿದ ಏರ್ ಇಂಡಿಯಾ

ಕೇಂದ್ರ ಸಚಿವ ಕಿರಣ್ ರಿಜಿಜುಗಾಗಿ ಏರ್ ಇಂಡಿಯಾ ಸಿಬ್ಬಂದಿ ಮೂವರು ಪ್ರಯಾಣಿಕರನ್ನು ಕೆಳಗಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ...

ಸಚಿವ ಕಿರಣ್ ರಿಜಿಜುಗಾಗಿ 3 ಪ್ರಯಾಣಿಕರನ್ನು ಹೊರದಬ್ಬಿದ ಏರ್ ಇಂಡಿಯಾ
ಏರ್ ಇಂಡಿಯಾ
Published On :

ನವದೆಹಲಿ: ಕೇಂದ್ರ ಸಚಿವ ಕಿರಣ್ ರಿಜಿಜುಗಾಗಿ ಏರ್ ಇಂಡಿಯಾ ಸಿಬ್ಬಂದಿ ಮೂವರು ಪ್ರಯಾಣಿಕರನ್ನು ಕೆಳಗಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಿರಣ್ ರಿಜಿಜು ಹಾಗೂ ನಿರ್ಮಲ್ ಸಿಂಗ್ ಅವರು ಜೂನ್ 24 ರಂದು ಲೇಹ್ ನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಏರ್ ಇಂಡಿಯಾ ವಿಮಾನದಲ್ಲಿ ಸಚಿವರಿಗೆ ಸೀಟ್ ಇರಲಿಲ್ಲ. ಆದರೆ ಸಿಬ್ಬಂದಿಗಳು ಬಲವಂತವಾಗಿ ಮಗು ಸೇರಿ ಮೂವರು ಪ್ರಯಾಣಿಕರನ್ನು ಕೆಳಗಿಳಿಸಿ ಸಚಿವ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಏರ್ ಇಂಡಿಯಾ ಅಧಿಕಾರಿಗಳ ಹಾಗೂ ಸಿಬ್ಬಂದಿಯ ನಡೆ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಿರಣ್ ರಿಜಿಜು, ವಿಮಾನ ವೇಳಾ ಪಟ್ಟಿಯನ್ನು ಬದಲಾಯಿಸಲಾಗಿದ್ದು, ಇದು ವಿಮಾನ ಸಿಬ್ಬಂದಿಯ ಸಂವಹನ ಕೊರತೆಯಿಂದ ಸಂಭವಿಸಿದೆ ಎಂದು ಸ್ಪಷ್ಟಿಕರಣ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.