ಪ್ರಧಾನಿ ಮೋದಿ ಗುಜರಾತ್ ಜನರ ಕ್ಷಮೆ ಕೋರಬೇಕು: ಕಾಂಗ್ರೆಸ್
ಗುಜರಾತ್ ಗಲಭೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನರ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ನವದೆಹಲಿ: ಗುಜರಾತ್ ಗಲಭೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನರ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಮಾಜಿ ಪ್ರಧಾನಿ ಆಟಲ್ ಬಿಹಾರಿ ವಾಜಪೇಯಿ ಅವರು ಗುಜರಾತ್ ಗಲಭೆ ಬಗ್ಗೆ ಅಸಮಾಧಾನ ಹೊಂದಿದ್ದರಲ್ಲದೆ ಅದು ನಮ್ಮ ಕಡೆಯಿಂದ ಆಗಿರುವ ತಪ್ಪು ಎಂದಿದ್ದರು ಎಂದು ಮಾಜಿ ರಾ ಅಧ್ಯಕ್ಷರಾದ ದುಲತ್ ತಿಳಿಸಿದ್ದಾರೆ.
ಈ ವಿಷಯವನ್ನೇ ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್ ನರೇಂದ್ರ ಮೋದಿ ಕ್ಷಮೆ ಕೋರಬೇಕು ಎಂದು ಪಟ್ಟು ಹಿಡಿದಿದೆ.
ಕಾಂಗ್ರೆಸ್ ವಕ್ತಾರ ಅಜಯ್‌ಕುಮಾರ್ ಮಾತನಾಡಿ ಬಿಜೆಪಿಯದು ಹುಸಿ ರಾಷ್ಟ್ರೀಯವಾದ ಎಂದು ಟೀಕಿಸಿದ್ದಾರೆ. ದುಲತ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಗುಜರಾತ್ ಗಲಭೆಗೆ ನರೇಂದ್ರ ಮೋದಿ ಅವರೇ ನೇರ ಹೊಣೆ ಅವರು ಈ ಕೂಡಲೇ ದೇಶದ ಜನರ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದಾರೆ.
ಮೋದಿ ಅವರ ತಪ್ಪನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಎತ್ತಿ ತೋರಿಸಿದ್ದಾರೆ. ಮೋದಿ ಅವರಿಗೆ ರಾಜಧರ್ಮ ಪಾಲಿಸಲು ಬರುತ್ತಿಲ್ಲ ಅವರಿಗೆ ನೈತಿಕತೆ ಇದ್ದರೆ ಪ್ರಧಾನಿ ಹುದ್ದೆಯನ್ನು ತ್ಯಜಿಸಲಿ ಎಂದು ಸವಾಲು ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


