ದೇಶ

ಆಸ್ಪತ್ರೆಯಿಂದ ಮನೆಗೆ ಹಿಂದಿರುಗಿದ ಹೇಮಾಮಾಲಿನಿ

ಕಾರು ಅಪಘಾತದಿಂದ ಗಾಯಗೊಂಡಿದ್ದ ಸಂಸದೆ, ಚಿತ್ರನಟಿ ಹೇಮಾಮಾಲಿನಿ ಶನಿವಾರ ಆಸ್ಪತ್ರೆಯಿಂದ...

ಆಸ್ಪತ್ರೆಯಿಂದ ಮನೆಗೆ ಹಿಂದಿರುಗಿದ ಹೇಮಾಮಾಲಿನಿ
ಅಪಘಾತದಲ್ಲಿ ಗಾಯಗೊಂಡಿದ್ದ ಹೇಮಾಮಾಲಿನಿ
Published On :

ಮುಂಬೈ: ಕಾರು ಅಪಘಾತದಿಂದ ಗಾಯಗೊಂಡಿದ್ದ ಸಂಸದೆ, ಚಿತ್ರನಟಿ ಹೇಮಾಮಾಲಿನಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಬೆಳಗ್ಗೆ 9.30ಕ್ಕೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ವಿಶ್ರಾಂತಿಗಾಗಿ ಮುಂಬೈಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೇಮಾಮಾಲಿನಿ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದರು. ಬಲ ಕಣ್ಣಿನ ಮೇಲ್ಭಾಗದಲ್ಲಿ ಅಲ್ಪ ಪ್ರಮಾಣದಲ್ಲಿ ಗಾಯಗಳಾಗಿದ್ದವು, ಕೂಡಲೇ ಅವರನ್ನು ಫೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೇಮಾಮಾಲಿನಿ ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಮಾರುತಿ ಆಲ್ಟೋ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿತ್ತು.

ಅಪಘಾತದಲ್ಲಿ ಆಲ್ಟೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹೆಣ್ಣು ಮಗು ಅಸುನೀಗಿತ್ತು. ಆಲ್ಟೋ ಕಾರಿನಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ ಐದು ಮಂದಿ ಪ್ರಯಾಣಿಸುತ್ತಿದ್ದರು.

ಮಗು ಸಾವಿಗೆ ಸಂತಾಪ ಕೋರಿದ ಇಶಾ ಡಿಯೋಲ್ 
ಅಪಘಾತದಲ್ಲಿ ಆಲ್ಟೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹೆಣ್ಣು ಮಗು ನಿಧನಕ್ಕೆ ಬಾಲಿವುಡ್ ನಟಿ ಹಾಗೂ ಹೇಮಾಮಾಲಿನಿ ಪುತ್ರಿ ಎಂದು ಇಶಾ ಡಿಯೋಲ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದೊಂದು ಆಕಸ್ಮಿಕ ಹಾಗೂ ಊಹಿಸಲಾಗದಂತ ಘಟನೆಯಾಗಿದ್ದು, ಹೀಗೆ ನಡೆಯಬಾರದಿತ್ತು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.