ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ ಜಯಲಲಿತಾ
ತಮಿಳುನಾಡು ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಜೆ.ಜಯಲಲಿತಾ ಅವರು ಶನಿವಾರ ಶಾಸಕಿಯಾಗಿ ಪ್ರಮಾಣವಚನ...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಜೆ.ಜಯಲಲಿತಾ ಅವರು ಶನಿವಾರ ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಉತ್ತರ ಚೆನ್ನೈನ ರಾಧಾಕೃಷ್ಣನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಸಿಪಿಐ ನಾಯಕ ಸಿ ಮಹೇಂದ್ರನ್ ಮತ್ತು ಸಾಮಾಜಿಕ ಕಾರ್ಯಕರ್ತ ಕೆ ಆರ್ ರಾಮಸ್ವಾಮಿ ಸೇರಿದಂತೆ 27 ಅಭ್ಯರ್ಥಿಗಳನ್ನು 1,50,722 ಮತಗಳಿಂದ ಪರಾಭವಗೊಳಿಸಿದ್ದ ಜಯಲಲಿತಾ ಅವರು ಇಂದು ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ತಮಿಳುನಾಡು ವಿಧಾನಸಭೆಯಲ್ಲಿರುವ ತಮ್ಮ ಕೊಠಡಿಯಲ್ಲಿ ವಿಧಾನಸಭಾಧ್ಯಕ್ಷ ಪಿ.ಧನಪಾಲ್ ಅವರು ಜಯಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ಕಳೆದ ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಜಯಲಲಿತಾ ಅವರ ಶಾಸಕತ್ವ ಅನರ್ಹಗೊಂಡಿತ್ತು. ಪ್ರಕರಣ ಸಂಬಂಧ ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಯಾ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಆದರೆ, ನಂತರದಲ್ಲಿ ಕರ್ನಾಟಕ ಹೈಕೋರ್ಟ್ ಜಯಾ ಅವರನ್ನು ನಿರ್ದೋಷಿ ಎಂದು ತೀರ್ಪು ನೀಡಿದ್ದರಿಂದ ಜಯಾ ಅವರು ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


